ಸುಚನಾ ಸೇಠ್ ಮಗುವಿನೊಂದಿಗೆ ಸಂಗ್ರಹ ಚಿತ್ರ,ಬಲಚಿತ್ರದಲ್ಲಿ ಸುಚನಾ ಸೇಠ್ ಬಂಧಿಸಿ ವಿಚಾರಣೆಗೆ ಕರೆತರುತ್ತಿರುವುದು 
ರಾಜ್ಯ

ಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ: ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯ, ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ

ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.

ಬೆಂಗಳೂರು: ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.

ಗೋವಾದ ಸರ್ವಿಸ್ ಅಪಾರ್ಟ್ ಮೆಂಟ್ ನಲ್ಲಿ ಮಗುವನ್ನು ಕೊಂದು ಸೂಟ್ ಕೇಸ್ ನಲ್ಲಿ ಹಾಕಿ ಬೆಂಗಳೂರಿಗೆ ಟ್ಯಾಕ್ಸಿಯಲ್ಲಿ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದ ಸುಚನಾ ಸೇಠ್ ಳನ್ನು ನಿನ್ನೆ ಚಿತ್ರದುರ್ಗದ ಐಮಂಗಲ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದರು. ನಂತರ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ತಾನು ಹೆತ್ತ ಮಗುವನ್ನೇ ತನ್ನ ಕೈಯಾರೆ ಕೊಲ್ಲುವಂಥ ಕ್ರೂರ ನಿರ್ಧಾರವನ್ನು ಏಕೆ ಮಾಡಿದರು ಎಂದು ಸತ್ಯ ತಿಳಿಯಲು ಖಾಕಿಪಡೆ ಸುಚನಾರನ್ನು ತೀವ್ರ ವಿಚಾರಣೆಗೊಳಪಡಿಸುತ್ತಿದೆ.

ಇಂದು ಅಂತ್ಯಸಂಸ್ಕಾರ: ಮಗುವಿನ ಮೃತದೇಹ ಬೆಂಗಳೂರಿನಲ್ಲಿ ಸುಚನಾ ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಕರೆತರಲಾಗುತ್ತಿದ್ದು ಬಳಿಕ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ಮಗುವಿನ ತಂದೆ ವೆಂಕಟ ರಾಮನ್ ಇಂಡೋನೇಷಿಯಾದಿಂದ ಚಿತ್ರದುರ್ಗಕ್ಕೆ ಬಂದು ಪೊಲೀಸರೊಂದಿಗೆ ವಿಚಾರಣೆಗೆ ಸಹಕರಿಸಿದ್ದು ಇಂದು ಬೆಂಗಳೂರಿನಲ್ಲಿ ಮಗುವಿನ ಅಂತ್ಯಸಂಸ್ಕಾರ ನಡೆಸಲಿದ್ದಾರೆ. 

6 ದಿನ ಪೊಲೀಸ್ ಕಸ್ಟಡಿಗೆ: ಸುಚನಾರ ಹಿನ್ನೆಲೆ, ಪತಿ ವೆಂಕಟರಮಣ ಜೊತೆ ಇದ್ದ ಸಂಬಂಧ, ಕುಟುಂಬ ಹಾಗೂ ಮಗುವಿನ ಹತ್ಯೆಗೆ ವಿಚಾರಣೆಗೊಳಪಡಿಸಲು ಸುಚನಾಳನ್ನು ಗೋವಾ ಪೊಲೀಸರು 6 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದಾರೆ. ಈ ಮಧ್ಯೆ ಪತಿ ವೆಂಕಟರಮಣರನ್ನು ಸಹ ಕರೆಸಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಮರಣೋತ್ತರ ಪರೀಕ್ಷೆ ಏನು ಹೇಳುತ್ತದೆ?: ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ಅವರು ಮೃತ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದರು.

ಪ್ರಕರಣದ ಬಗ್ಗೆ ನಮಗೇನೂ ಗೊತ್ತಿಲ್ಲ: ಪ್ರಕರಣ ಸಂಬಂಧ ಮಾತನಾಡಿದ ಕೊಲೆಗೀಡಾಗಿರುವ ಬಾಲಕನ ತಂದೆ ವೆಂಕಟ ರಾಮನ್ ಸಂಬಂಧಿ, ವೆಂಕಟ ರಾಮನ್ ತುಂಬಾ ನೋವಿನಲ್ಲಿದ್ದಾರೆ, ಒಂಟಿಯಾಗಿರಲು ಬಿಟ್ಟುಬಿಡಿ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ನಮಗೇನು ಗೊತ್ತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ