ಘನ ತ್ಯಾಜ್ಯ ವಿಲೇವಾರಿ ದೂರು, ಖುದ್ದು ಪರಿಶೀಲನೆ ನಡೆಸಿದ ಲೋಕಾಯುಕ್ತ 
ರಾಜ್ಯ

ಬೆಂಗಳೂರು: ಅಸಮರ್ಪಕ ಘನ ತ್ಯಾಜ್ಯ ವಿಲೇವಾರಿ ದೂರು; ಖುದ್ದು ಪರಿಶೀಲನೆ ನಡೆಸಿದ ಲೋಕಾಯುಕ್ತ

ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದ ಪ್ರದೇಶಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು:  ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದ ಪ್ರದೇಶಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಕಸ ವಿಲೇವಾರಿ ಮತ್ತು ಘನತ್ಯಾಜ್ಯ ನಿರ್ವಹಣೆಯಲ್ಲಿ ಅಕ್ರಮಗಳನ್ನು ಪರಿಶೀಲಿಸಿದರು.

ನಗರದಲ್ಲಿನ ಅಸಮರ್ಪಕ ಘನ ತ್ಯಾಜ್ಯ ವಿಲೇವಾರಿ ಮತ್ತು ವಿಲೇವಾರಿಯಲ್ಲಿ ಅಕ್ರಮಗಳ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಖುದ್ದು ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಮಂಗಳವಾರ ನಗರದ ವಿವಿಧೆಡೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ನ್ಯಾ.ಕೆ.ಎನ್.ಪಣೀಂದ್ರ ಅವರು ಪ್ರತ್ಯೇಕ ಸ್ಥಳಗಳಿಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಶಾಲೆ ಮತ್ತು ಆಸ್ಪತ್ರೆ ಮುಂದೆ ಬಿದ್ದಿರುವ ಕಸ ಹಾಗೂ ಘನ ತ್ಯಾಜ್ಯವಿಲೇವಾರಿ ಘಟಕಗಳಲ್ಲಿನ ಅವ್ಯವಸ್ಥೆ ಕಂಡು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರಂ ಆಗಿ ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆ ತೆಗೆದುಕೊಂಡರು.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ

ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಅವರು ಬೆಂಗಳೂರು ಉತ್ತರ ಭಾಗದ ಹೆಬ್ಬಾಳ, ಯಲಹಂಕ, ಎಂ.ಎಸ್.ಪಾಳ್ಯ, ದಾಸರಹಳ್ಳಿ ಸೇರಿದಂತೆ ಇತರೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು, ಉಪಲೋಕಾಯುಕ್ತ ನ್ಯಾ. ಕೆ.ಎನ್.ಫಣಿಂದ್ರ ಅವರು ಬೆಂಗಳೂರು ದಕ್ಷಿಣ ಭಾಗದ ಆಸ್ಟಿನ್‌ಟೌನ್, ಆನೇಪಾಳ್ಯ, ನಿಮ್ಹಾನ್ಸ್, ಸಂಜಯ್‌ಗಾಂಧಿ ಆಸ್ಪತ್ರೆಯ ಸುತ್ತಮುತ್ತಲ ಪ್ರದೇಶ, ಬನಶಂಕರಿ 6ನೇ ಹಂತದ ಲಿಂಗಧೀರನಹಳ್ಳಿಯಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿದರು. ಈ ವೇಳೆ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಖುದ್ದು ಪರಿಶೀಲನೆ ನಡೆಸಿದರು.

ಘಟಕಗಳಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕಸದ ವಾಹನಗಳನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳುವಂತೆ ನಿರ್ದೇಶನ ನೀಡಲಾಯಿತು. ಅಲ್ಲದೇ, ವಿಲೇವಾರಿಯಲ್ಲಿ ಕೆಲವು ಅಕ್ರಮಗಳ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪ್ರಶ್ನಿಸಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸ್ಥಳಕ್ಕೆ ಬಿಬಿಎಂಪಿ ಜಂಟಿ ಆಯುಕ್ತರನ್ನು, ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ಕರೆಸಿ ಆದಷ್ಟು ಬೇಗ ಸ್ವಚ್ಛಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಯಿತು. ಈ ಸಂಬಂಧ ಲೋಕಾಯುಕ್ತ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT