ಸಂಗ್ರಹ ಚಿತ್ರ 
ರಾಜ್ಯ

ಶಾಸಕರು/ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ: ಮಾಹಿತಿ ನೀಡುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಸೂಚನೆ

ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಬೆಂಗಳೂರು: ಹಾಲಿ ಮತ್ತು ಮಾಜಿ ಶಾಸಕರು ಹಾಗೂ ಸಂಸದರ ವಿರುದ್ಧ ವಿಚಾರಣಾ ಹಂತದಲ್ಲಿರುವ ಕ್ರಿಮಿನಲ್ ಪ್ರಕರಣಗಳ ಕುರಿತು ಮಾಹಿತಿ ಸಲ್ಲಿಸುವಂತೆ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆಯ ವೇಳೆ ಅಮಿಕಸ್‌ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು “ಸುಪ್ರೀಂ ಕೋರ್ಟ್‌ 2023ರ ನವೆಂಬರ್‌ನಲ್ಲಿ ಕೆಲವು ನಿರ್ದೇಶನಗಳನ್ನು ನೀಡಿದ್ದು, ಇದನ್ನು ಉಲ್ಲೇಖಿಸಿ ನವೆಂಬರ್‌ 9ರಂದು ಮೆಮೊ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ  ಸಿಜೆ ಅವರು “ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅನುಗುಣವಾಗಿ ನಾವು ಕ್ರಮಕೈಗೊಂಡಿದ್ದೇವೆ” ಎಂದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸೋಂಧಿ ಅವರು “ಪ್ರಧಾನ ಸತ್ರ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಶಾಸಕರು ಮತ್ತು ಸಂಸದರಿಗೆ ಸಂಬಂಧಿಸಿದ ಬಾಕಿ ಇರುವ ಪ್ರಕರಣಗಳನ್ನು ರಿಜಿಸ್ಟ್ರಿಯು ವಿಭಾಗೀಯ ಪೀಠದ ಮುಂದೆ ಮಂಡಿಸಲು ಸೂಚಿಸಬೇಕು. ಇದರಿಂದ ಆ ಪ್ರಕರಣಗಳಲ್ಲಿನ ಬೆಳವಣಿಗೆ ಪರಿಶೀಲಿಸಲು ಅನುಕೂಲವಾಗಲಿದೆ” ಎಂದರು.

ಮುಂದುವರಿದು, “2022ರ ಮಾರ್ಚ್‌ 5ರಂದು ಹೈಕೋರ್ಟ್‌ ಆದೇಶ ಮಾಡಿದ್ದು, ಹಲವು ಶಾಸಕರು/ ಸಂಸದರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವುದರ ಕುರಿತಾದ ಸ್ಥಿತಿಗತಿಯ ಬಗ್ಗೆ ಈ ನ್ಯಾಯಾಲಯದ ಪರಿಶೀಲನೆಯಾಗಬೇಕಿದೆ. ಈ ವಿಚಾರದಲ್ಲಿ ಸಾಕಷ್ಟು ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಬೇಕಿದೆ. ನ್ಯಾಯಾಲಯಕ್ಕೆ ಸಮಯಾವಕಾಶ ಆದಾಗ ಇದನ್ನು ಕೈಗೆತ್ತಿಕೊಳ್ಳಬಹುದು” ಎಂದರು.

ಇದನ್ನು ಆಲಿಸಿದ ಪೀಠವು “2023 ನವೆಂಬರ್‌ 9ರ ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು ನವೆಂಬರ್‌ 20ರಂದು ಆದಿತ್ಯ ಸೋಂಧಿ ಅವರು ಮೆಮೊ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಅಮಿಕಸ್‌ ಕೋರಿಕೆಯಂತೆ ರಿಜಿಸ್ಟ್ರಿಯು ಆದೇಶ ಅನುಪಾಲನೆ ಮಾಡಿದೆ. ಈ ಆದೇಶಕ್ಕೂ ಮುನ್ನ ಹೈಕೋರ್ಟ್‌ ಕೆಲವು ನಿರ್ದೇಶನಗಳನ್ನು ನೀಡಿದ್ದು, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳಿಗೆ ಅನುಪಾಲನಾ ವರದಿಯನ್ನು ರಿಜಿಸ್ಟ್ರಿ ಸಲ್ಲಿಸಬೇಕು” ಎಂದು ಆದೇಶಿಸಿ, ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT