ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ 
ರಾಜ್ಯ

ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. 

ಶಿವಮೊಗ್ಗ: ಶಿವಮೊಗ್ಗದಲ್ಲಿರುವ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರು ಇಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ. 

ಇಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರಿಡುತ್ತೇವೆ. ಯಾಕಂದ್ರೆ, ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಅವರು ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಹೀಗಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭುರವರ ಹೆಸರು ಸೂಕ್ತ ಎಂದು ಹೇಳಿದರು.

ಅಲ್ಲಮ ಪ್ರಭು ಒಬ್ಬ ಶ್ರೇಷ್ಠ ಕವಿಯಾಗಿದ್ದು, ಅವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ನಮ್ಮ ನಾಡಿಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಿಎಂ ಹೇಳಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಆಶಯದಂತೆ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಅವರ ಹೆಸರು ಇಡುವುದು ಸೂಕ್ತ ಎಂದು ನಾನೂ ಸಹ ಭಾವಿಸಿದ್ದೇನೆ. ಹೀಗಾಗಿ ಫ್ರೀಡಂ ಪಾರ್ಕ್‌ಗೆ ಅಲ್ಲಮ ಪ್ರಭು ಎಂದು ನಾಮಕರಣ ಮಾಡಲು ನಾನು ಸಿದ್ಧ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ

'ಅಮೇಥಿ ಬಿಟ್ಟು ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು: SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'

‘ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ’: ಜಾನ್ವಿ ಕಪೂರ್ ಬೆನ್ನಿಗೆ ನಿಂತ ನಟಿ ಖುಷ್ಬೂ ಸುಂದರ್

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ!-Video

'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರು