ಯಲಚೇನಹಳ್ಳಿಯಲ್ಲಿ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಿಗಳಿಂದ ಮನವಿ ಸ್ವೀಕರಿಸಿದರು. 
ರಾಜ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಶೀಘ್ರ ಕಾವೇರಿ ನೀರು ಒದಗಿಸಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಂ.ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇದ್ದು, ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಡಿಕೆ.ಶಿವಕುಮಾರ್ ಅವರು, 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆ ಅಂತಿಮ ಹಂತದಲ್ಲಿದೆ. ಮುಂದಿನ 3-4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ತಕ್ಷಣವೇ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ 18 ಕಿ.ಮೀ. ರಸ್ತೆಯ ಒತ್ತಡ ಕಡಿಮೆ ಮಾಡಲು ಪರ್ಯಾಯ ರಸ್ತೆ ಮಾಡಬೇಕಿದೆ. ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯೆ ಹೊಸ ರಸ್ತೆ ನಿರ್ಮಿಸುವ ಯೋಜನೆಗೆ ಈ ಹಿಂದೆ ಬಿಡಿಎ ಅಧಿಸೂಚನೆ ಹೊರಡಿಸಿದೆ. ಅದಕ್ಕೆ ಮರುಜೀವ ನೀಡಲು ಪ್ರಯತ್ನ ಆರಂಭವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ