ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾ ಸಂಖ್ಯೆಯಲ್ಲಿ ಇಳಿಕೆ: 119 ಮಂದಿಗೆ ಪಾಸಿಟಿವ್; ಇಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 119 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 959ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 119 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 959ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 33 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 119 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 152 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4,942 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.54 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 905 ಮಂದಿ ಮನೆ ಆರೈಕೆಗೆ ಒಳಗಾದರೆ, 54 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

AI ಬರಹ, ನಕಲಿ ಲೇಖಕರು: ಕೊಯಮತ್ತೂರಿನ ಗ್ರಂಥಾಲಯದಲ್ಲಿ ನಕಲಿ ಪುಸ್ತಕಗಳ ಜಾಲ! ಸಾಹಿತ್ಯ ಲೋಕವನ್ನು ಬೆಚ್ಚಿಬೀಳಿಸಿದ ಪೆರಿಯಾರ್ ಅರಿವುಳಗಂ ಗ್ರಂಥಾಲಯ ಹಗರಣ

SBI ಬ್ಯಾಂಕ್‌ಗೆ ₹12,668 ಕೋಟಿ ಸಾಲ ಬಾಕಿ: ಮಾಜಿ ವೀಡಿಯೊಕಾನ್ ಮುಖ್ಯಸ್ಥ ವೇಣುಗೋಪಾಲ್ ಧೂತ್ ದಿವಾಳಿ ಎಂದ NCLT

OBC ಮೀಸಲಾತಿ ಕುರಿತು ಸುಪ್ರೀಂ ಮಹತ್ವದ ತೀರ್ಪು: ಕೇವಲ ವೇತನವಷ್ಟೇ ಮಾನದಂಡವಲ್ಲ ಎಂದ ಸರ್ವೋಚ್ಚ ನ್ಯಾಯಾಲಯ

India vs New Zealand, 2nd ODI: ಭಾರತದ ಬೌಲರ್‌ಗಳ ಮುಂದೆ ಮಂಡಿಯೂರಿದ ನ್ಯೂಜಿಲೆಂಡ್ ಬ್ಯಾಟರ್‌ಗಳು; 134 ರನ್‌ಗಳಿಗೆ ಆಲೌಟ್!

'ತುರ್ತು ಪರಿಸ್ಥಿತಿಯ ಅತಿರೇಕದ ಘಟನೆಗಳಿಗೆ ಸಂಜಯ್ ಮಾತ್ರ ಕಾರಣರಲ್ಲ': ಅತ್ತೆ ಇಂದಿರಾ ಮೇಲೆ ಸಾಕಷ್ಟು ಒತ್ತಡವಿತ್ತು; ಸೋನಿಯಾ ಗಾಂಧಿ