ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ದೆಹಲಿ ಪ್ರವಾಸ ಬಳಿಕ ವಿದೇಶಕ್ಕೆ ಹಾರಿದ ಸಚಿವ ಸತೀಶ್ ಜಾರಕಿಹೊಳಿ

ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಳಗಾವಿ: ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

‘ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಂಬಂಧವಾಗಿ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಸಾಕಷ್ಟು ಚರ್ಚೆ ನಡೆದಿದ್ದವು. ಈ ಸಂಬಂಧ ಹೈಕಮಾಂಡ್ ಹಲವು ಸೂಚನೆಗಳನ್ನು ನೀಡಿದ್ದು, ಇದರಿಂದ ಬೇಸರಗೊಂಡು ವಿದೇಶಕ್ಕೆ ಹೋಗಿರಬಹುದು ಹೇಳಲಾಗುತ್ತಿದೆ.

ನಿನ್ನೆಯಷ್ಟೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದ್ದು, ಸಭೆಗೆ ಕರ್ನಾಟಕ, ತಮಿಳುನಾಡು ಹಾಗೂ ತೆಲಂಗಾಣದ ಪಾರ್ಲಿಮೆಂಟ್ ಸಮನ್ವಯಾಧಿಕಾರಿಗಳನ್ನು ಆಹ್ವಾನಿಸಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆದಿತ್ತು. ರಾಜ್ಯದಿಂದ ಸಚಿವರು ಹಾಗೂ ಕೆಲವು ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದೆ. ಈ ನಿಟ್ಟಿನಲ್ಲಿ ನಿಮ್ಮಲ್ಲಿ ಹೆಚ್ಚಿನ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಗಂಭೀರವಾಗಿ ಎದುರಿಸಿ. ಒಂದು ವೇಳೆ ಚುನಾವಣೆಯಲ್ಲಿ ಸೋತಿದ್ದೇ ಆದರೆ, ಸಂಬಂಧಪಟ್ಟ ಸಚಿವರ ತಲೆದಂಡ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT