ರೇಸ್ ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ದಾಳಿ; 3.47 ಕೋಟಿ ರೂಪಾಯಿ ವಶ!
ರೇಸ್ ಕೋರ್ಸ್ ನ ಕುದುರೆ ರೇಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು 3.47 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು: ರೇಸ್ ಕೋರ್ಸ್ ನ ಕುದುರೆ ರೇಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು 3.47 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಬುಕ್ಕಿಂಗ್ ಕೌಂಟರ್ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದ ಆರೋಪಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಕಳೆದ ರಾತ್ರಿ ಬುಕ್ಕಿಂಗ್ ಕೌಂಟರ್ಗಳನ್ನ ಲಾಕ್ ಮಾಡಿ ಕೌಂಟರ್ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ತಡೆದು ಪರಿಶೀಲನೆ ನಡೆಸಿದ್ದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದಾಳಿಯನ್ನು ಅಂತ್ಯಗೊಳಿಸಿದ್ದಾರೆ.
ಈ ವೇಳೆ 60 ಜನರನ್ನ ವಶಕ್ಕೆ ಪಡೆದು ಅವರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಂತರ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.