ಸಂಗ್ರಹ ಚಿತ್ರ 
ರಾಜ್ಯ

ಉದ್ಯಮಿ ಅಪಹರಿಸಿ ಸುಲಿಗೆ: ಯುಪಿಎಸ್'ಸಿ ಆಕಾಂಕ್ಷಿ ಸೇರಿ ಇಬ್ಬರ ಬಂಧನ

ಉದ್ಯಮಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎಸ್'ಸಿ ಆಕಾಂಕ್ಷಿ ಸೇರಿ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಉದ್ಯಮಿಯೊಬ್ಬರನ್ನು ಅಪಹರಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಪಿಎಸ್'ಸಿ ಆಕಾಂಕ್ಷಿ ಸೇರಿ ಇಬ್ಬರು ಆರೋಪಿಗಳನ್ನು ರಾಜಾಜಿನಗರ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಚಿನ್, ಗೌರಿಶಂಕರ್ ಎಂದು ಗುರ್ತಿಸಲಾಗಿದೆ. ಇಬ್ಬರ ಪೈಕಿ ಓರ್ವ ಆರೋಪಿ ಸಚಿನ್ ಯುಪಿಎಸ್'ಸಿ ಆಕಾಂಕ್ಷಿ ಯಾಗಿದ್ದ ಎಂದು ತಿಳಿದುಬಂದಿದೆ.

ಅಪಹರಣಕ್ಕೊಳಗಾಗಿದ್ದ ವ್ಯಕ್ತಿಯನ್ನು ಚೇತನ್ ಶಾ ಎಂದು ಗುರುತಿಸಲಾಗಿದ್ದು, ಚೇತನ್ ಅವರು ತಮ್ಮ ಮಗಳನ್ನು ಸಿಬಿಡಿ ಪ್ರದೇಶದ ಹೆಸರಾಂತ ಕಾಲೇಜಿಗೆ ಬ್ಯಾಚುಲರ್ಸ್ ಇನ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಕೋರ್ಸ್‌ಗೆ ಸೇರಿಸಲು ಬಯಸಿದ್ದರು. ಈ ಪ್ರಯತ್ನದಲ್ಲಿ ಆರೋಪಿಗಳ ಸಂಪರ್ಕಕ್ಕೆ ಸಿಕ್ಕಿದ್ದಾರೆ. ಸೀಟ್ ಕೊಡಿಸುವ ಭರವಸೆಯನ್ನು ಆರೋಪಿಗಳು ಚೇತನ್ ಅವರಿಗೆ ನೀಡಿದ್ದಾರೆ.

ಚೇತನ್ ಅವರು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯನ್ನು ಹೊಂದಿದ್ದು, ಇತರರ ನೆರವಿನೊಂದಿಗೆ ಮಗಳಿಗಾಗಿ ಸೀಟು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಆರೋಪಿಗಳು ಸೀಟು ಸಿಕ್ಕಿರುವುದು ತಮ್ಮಿಂದ ಎಂದು ಹೇಳಿ, ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಚೇತನ್ ಅವರು ಹಣ ನೀಡರು ನಿರಾಕರಿಸಿದ್ದಾನೆ. ಇದರಿಂದ ಕೆಂಡಾಮಂಡಲಗೊಂಡಿರುವ ಆರೋಪಿಗಳು ಚೇತನ್ ಅವರನ್ನು ಆಟೋರಿಕ್ಷಾದಲ್ಲಿ ಅಪಹರಿಸಿ, 7 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದಾರೆ.

ಜನವರಿ 5 ರಂದು ಡಾ ರಾಜ್‌ಕುಮಾರ್ ರಸ್ತೆಯಿಂದ ಚೇತನ್ ಅವರನ್ನು ಅಪಹರಿಸಿದ್ದಾರೆ. ಹಣ ನೀಡುವಂತೆ ಚೇತನ್ ಅವರ ಪತ್ನಿಯನ್ನು ಸಂಪರ್ಕಿಸಿದ್ದಾರೆ. ಹಣ ಪಡೆದ ಬಳಿಕ ಚೇತನ್ ಅವರನ್ನು ಬಿಡುಗಡೆ ಮಾಡಿದ್ದಾರೆ.

ಬಿಡುಗಡೆಗೊಂಡ ಬಳಿಕ ಚೇತನ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಂತೆ ರಾಜಾಜಿನಗರ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅಪಹರಣಕ್ಕಾಗಿ ಬಳಸಿದ್ದ ಆಟೋ ಹಾಗೂ ಎರಡು ಫೋನ್ ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT