ಕೊರೋನಾ ಸೋಂಕು 
ರಾಜ್ಯ

ರಾಜ್ಯದಲ್ಲಿ ಇಂದು 113 ಕೋವಿಡ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 958ಕ್ಕೆ ಏರಿಕೆ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 958ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಕಡಿಮೆಯಾಗಿದ್ದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 958ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 40 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 113 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಯಾರು ಮೃತಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 154 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3,208 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.52ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 909 ಮಂದಿ ಮನೆ ಆರೈಕೆಗೆ ಒಳಗಾದರೆ, 49 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'