ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು
ನಗರದಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್‌ನ ಮ್ಯಾನೇಜರ್ ಮತ್ತು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೃತಪಟ್ಟಿದ್ದಾರೆ.
ಬೆಂಗಳೂರು: ನಗರದಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್‌ನ ಮ್ಯಾನೇಜರ್ ಮತ್ತು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೃತಪಟ್ಟಿದ್ದಾರೆ.
ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಕೆರೆ ನಿವಾಸಿ ಅನಿಲ್ ಕುಮಾರ್ ಮೃತ ದುರ್ದೈವಿ. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಅನಿಲ್ ಕುಮಾರ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಜೆಪಿ ಪಾರ್ಕ್ ರಸ್ತೆಯ ಅಕ್ಕಯ್ಯಮ್ಮ ಬಾರ್ ಬಳಿ ಮಧ್ಯರಾತ್ರಿ 12.45ಕ್ಕೆ ಘಟನೆ ನಡೆದಿದೆ. ಈ ಸಂಬಂಧ ಯಶವಂತಪುರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಘಟನೆಯಲ್ಲಿ, 32 ವರ್ಷದ ರಾಜೇಶ್ ಕುಮಾರ್ ಮೃತಪಟ್ಟಿದ್ದಾರೆ. ಇವರು Zomato ಉದ್ಯೋಗಿಯಾಗಿದ್ದು, ಸುರಂಜನ್ ದಾಸ್ ರಸ್ತೆಯಲ್ಲಿ ಬೆಳಗಿನ ಜಾವ 1 ಗಂಟೆಗೆ ವೇಗವಾಗಿ ಬಂದ ಕಾರೊಂದು ರಾಜೇಶ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ರಾಜೇಶ್ ಅವರಿಗೆ ಗಂಭೀರವಾಗಿದೆ. ಕೂಡಲೇ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಘಟನೆ ಸಂಬಂಧ ಎಚ್‌ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.