ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹಬ್ಬದ ಸಡಗರದ ನಡುವೆಯೇ ಶೋಕ: ಪ್ರತ್ಯೇಕ ಅಪಘಾತ, 6 ಸಾವು, 7 ಮಂದಿಗೆ ಗಾಯ

ಇಡೀ ರಾಜ್ಯ ಸಂಕ್ರಾಂತಿ ಹಬ್ಬದ ಸಡಗರದಲ್ಲಿರುವಂತೆಯೇ ಇಂದು ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಸಾವಿಗೀಡಾಗಿ 7 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಸಾಂದರ್ಭಿಕ ಚಿತ್ರ
Srinivasa Murthy VN
Updated On : 15 Jan 2024, 1:24 pm

ಬೆಂಗಳೂರು: ಇಡೀ ರಾಜ್ಯ ಸಂಕ್ರಾಂತಿ ಹಬ್ಬದ ಸಡಗರದಲ್ಲಿರುವಂತೆಯೇ ಇಂದು ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಸಾವಿಗೀಡಾಗಿ 7 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ಹೋಗುತ್ತಿದ್ದ ಬೈಕ್​ಗೆ ಭತ್ತ ಕಟಾವು ಮಾಡುವ ಲಾರಿ (Lorry) ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್​ನಲ್ಲಿ ಹೋಗುತ್ತಿದ್ದ ಮೂವರು ಮೃತಪಟ್ಟಿದ್ದರೆ, ಓರ್ವ ಬಾಲಕ ಗಾಯಗೊಂಡಿದ್ದಾನೆ. ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ನಿವಾಸಿಗಳಾದ ಪತಿ ಸಂತೋಷ್(32), ಪತ್ನಿ ಸೌಮ್ಯ(27) ಹೆಣ್ಣು ಮಗು ನಿತ್ಯಸಾಕ್ಷಿ (4) ಮೃತ ದುರ್ದೈವಿಗಳು. ಗಾಯಗೊಂಡ ಮಗ ಅಭಿ (9) ಯನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ಳೇಗಾಲ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಕೊಳ್ಳೆಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Advertisement

Advertisement

ಇದನ್ನೂ ಓದಿ: ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ: ಪಾದಚಾರಿ ಸಾವು

ಮತ್ತೊಂದು ಘಟನೆಯಲ್ಲಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಬೊಲೆರೊ ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ. ಭದ್ರಾವತಿಯ ಚಂದನಕೆರೆ ಗ್ರಾಮದ ನಾಗರಾಜ್ (38), ಮಂಜುನಾಥ್ (45), ಗೌತಮ್ (17) ಮೃತ ದುರ್ದೈವಿಗಳು. ಕಾರ್ಮಿಕರು ಅಡಿಕೆ ಕೋಯ್ಲು ಮುಗಿಸಿ ಬೊಲೆರೊ ವಾಹನದಲ್ಲಿ ಆಗುತ್ತಿದ್ದರು. ವಾಹನ ಸವಳಂಗ ಸಮೀಪ ಆಗಮಿಸುತ್ತಿದ್ದಂತೆ ಹಸು ಅಡ್ಡ ಬಂದಿದೆ. ಹೀಗಾಗಿ ಚಾಲಕ ಹಸುವಿಗೆ ಗುದ್ದುವುದನ್ನು ತಪ್ಪಿಸಿದ್ದಾನೆ. ಆದರೆ ವಾಹನ ವೇಗ ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement