ರಾಜ್ಯ

ಕೃಷಿಕ-ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಬಾಳು ಬಂಗಾರವಾಗಲಿ: ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿದ ಸಿಎಂ

Manjula VN

ಬೆಂಗಳೂರು: ನಾಡಿನಾದ್ಯಂತ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತೆಗೆ ಹಬ್ಬಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಋತು ಮನ್ವಂತರದ ಹಬ್ಬವಾದ ಮಕರ ಸಂಕ್ರಾಂತಿ ಶಾಂತಿ,‌ ಸೌಹಾರ್ದತೆ, ಸಮೃದ್ಧಿಯ ಕಡೆಗೆ ನಾಡನ್ನು ಮುನ್ನಡೆಸಲಿ. ನಾಡು ಸಮೃದ್ಧ ಮಳೆ, ಬೆಳೆ ಕಂಡು ಕೃಷಿಕ - ಶ್ರಮಿಕರ ಬದುಕಿನಲ್ಲಿ ಸುಖ-ಶಾಂತಿಯ ಫಸಲು ಹುಲುಸಾಗಿ ಬೆಳೆಯಲಿ, ಅವರ ಬಾಳು ಬಂಗಾರವಾಗಲಿ.ನಾಡ ಬಾಂಧವರಿಗೆ ಸಂಕ್ರಾಂತಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಈ ಬಾರಿಯ ಸುಗ್ಗಿ ಹಬ್ಬವು ನಮ್ಮ ನಾಡಿಗೆ ಹಾಗೂ ರೈತರ ಬದುಕಲ್ಲಿ ಸುಖ, ಶಾಂತಿ, ನೆಮ್ಮದಿ ತರಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಪೋಸ್ಟ್ ಮಾಡಿದ್ದು, ನಾಡಿನ ಜನತೆಗೆ ಶುಭಾಶಯಗಗಳನ್ನು ಕೋರಿದ್ದಾರೆ.

ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ, ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಸಲಿ ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಪೋಸ್ಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ರೈತ ಕಾಯಕದ ಸಂಭ್ರಮಕ್ಕೆ ಸಾಕ್ಷಿಯಾಗಿರುವ ಸುಗ್ಗಿಯ ಹಬ್ಬವು ನಾಡಿನೆಲ್ಲೆಡೆ ನೆಮ್ಮದಿ ನೆಲೆಸಿ, ಎಲ್ಲರ ಬದುಕಿನಲ್ಲಿ ಸುಖ, ಸಂತೋಷ, ಸಮೃದ್ಧಿಯನ್ನು ಹೊತ್ತು ತರಲೆಂದು ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ.

SCROLL FOR NEXT