ರಾಜ್ಯ

ರಾಮದೇವರ ಬೆಟ್ಟದ ರಾಮಮಂದಿರ ಅಭಿವೃದ್ಧಿಗೆ ಸಂಸದ ಡಿಕೆ ಸುರೇಶ್ ಪತ್ರ

Srinivasamurthy VN

ಬೆಂಗಳೂರು: ರಾಮನಗರದ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರವನ್ನು ಅಭಿವೃದ್ಧಿ ಪಡಿಸುವಂತೆ ಕಾಂಗ್ರೆಸ್‌ ಪಕ್ಷದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ನ್ಯಾಯವ್ಯಾಪ್ತಿಯ ಕಂದಾಯ ಉಪ ಆಯುಕ್ತರು ಮತ್ತು ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಧಿಕೃತ ಅನುಮತಿ ಪಡೆಯುವುದಾಗಿ ತಿಳಿಸಿದರು. ಮೊದಲು ರಾಮನಗರ ತಾಲೂಕಿನಲ್ಲಿರುವ ರಾಮ ಮಂದಿರವನ್ನು ಅಭಿವೃದ್ಧಿ ಪಡಿಸಿ, ಬಳಿಕ ಕನಕಪುರದಲ್ಲಿ ರಾಮಮಂದಿರವನ್ನು ಕೈಗೆತ್ತಿಕೊಳ್ಳಬೇಕು ಎಂದರು.

ಕಳೆದ ವರ್ಷ ಮಾರ್ಚ್‌ನಲ್ಲಿ ರಾಮನಗರದ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಇದೇ ರೀತಿ ರಾಮನಗರದ 19 ಎಕರೆ ಜಾಗದಲ್ಲಿ 120 ಕೋಟಿ ರೂ.ವೆಚ್ಚದಲ್ಲಿ ರಾಮಮಂದಿರವನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಸರ್ಕಾರ ಪತನಗೊಂಡಿದ್ದರಿಂದ ಅದು ಸಾಕಾರಗೊಳ್ಳಲಿಲ್ಲ.

ಈ ಹಿಂದೆ ರಾಮನಗರದ ಹೊರವಲಯದಲ್ಲಿರುವ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಈ ಬಗ್ಗೆ ಸಚಿವ ಸಂಪುಟದಲ್ಲಿ ಈಗಾಗಲೇ ಚರ್ಚೆ ಮಾಡಲಾಗಿದೆ’ ಎಂದು ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಹೇಳಿದ್ದರು.
 

SCROLL FOR NEXT