ಗವಿ ಗಂಗಾಧರೇಶ್ವರ ದೇವಾಲಯದ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ 
ರಾಜ್ಯ

ಬೆಂಗಳೂರು: ಗವಿಗಂಗಾಧರೇಶ್ವರ ದೇಗುಲದ ಶಿವಲಿಂಗ ಸ್ಪರ್ಶಿಸಿದ ಸೂರ್ಯ ರಶ್ಮಿ!

ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ  ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು. 

ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಇಂದು ಸಂಜೆ ವಿಸ್ಮಯವೊಂದು ನಡೆಯಿತು. ಸೂರ್ಯನ ಬೆಳಕು ನೇರವಾಗಿ ಶಿವಲಿಂಗದ ಮೇಲೆ ಬಿದ್ದಿತು. ಸೂರ್ಯ ದಕ್ಷಿಣ ಪಥದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ  ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿತು. 

ಸಂಜೆ 5.20 ರಿಂದ 5.23 ನಿಮಿಷದವರೆಗೆ ಸೂರ್ಯರಶ್ಮಿ ನಂದಿಕೊಂಬಿನ ಮೂಲಕ ಹಾದುಹೋಗಿ ಶಿವನಿಗೆ ನಮಿಸಿತು. ಅಸಂಖ್ಯಾತ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಈ ಕೌತುಕವನ್ನು ಕಣ್ತುಂಬಿಕೊಂಡರು. ಈ ವಿಸ್ಮಯವನ್ನು ನೋಡಲು ದೇವಾಲಯದ ಹೊರಭಾಗದಲ್ಲಿ ಎರಡು ಎಲ್‌ಇಡಿ ಹಾಗೂ ಐದು ಟಿವಿಗಳ ವ್ಯವಸ್ಥೆ ಮಾಡಲಾಗಿತ್ತು. 

ಈ ವೇಳೆ ಅರ್ಚಕರನ್ನು ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಒಳ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ದೇವಸ್ಥಾನದಲ್ಲಿ ಹೋಮ, ಹವನಗಳು ನಡೆದವು. . ಅರ್ಚಕರು ಶಿವಲಿಂಗದ ಮೇಲೆ ಎಳನೀರು ಅಭಿಷೇಕ ಮಾಡಿದರು. ಕೆಲ ಸೆಕೆಂಡ್‌ಗಳ ಕಾಲ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸಿ ಮರೆಯಾಯಿತು.

ಈ ವಿಶೇಷ ದಿನಕ್ಕಾಗಿ ಬೆಳ್ಳಗ್ಗೆ 5 ಗಂಟೆಯಿಂದಲೇ ಗಂಗಾಧರನಿಗೆ ವಿಶೇಷ ಪೂಜೆ ಆರಂಭವಾಗಿತ್ತು. ಗಂಗಾಧರನಿಗೆ ಪಂಚಾಭೀಷೇಕ, ಪುಷ್ಪಾಭಿಷೇಕ, ಮಹಮಂಗಳಾರತಿ‌ ಮಾಡಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಸಾವಿರಾರು ಮಂದಿ ಭಕ್ತರು ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ, ಪುನಸ್ಕಾರಗಳೊಂದಿಗೆ ದೇವರ ದರ್ಶನ ಪಡೆದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT