ಸಂಗ್ರಹ ಚಿತ್ರ 
ರಾಜ್ಯ

ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ: ಜೈಲಿನಿಂದ ಹೊರಬಂದು ಮತ್ತೆ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಮತ್ತೆ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರವೆಸಗಿದ್ದು, ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಮತ್ತೆ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ಆನಂದ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ಬಸ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 2021 ರಲ್ಲಿ ಬ್ಯಾಡರಹಳ್ಳಿ ಪೊಲೀಸರು ಈತನನ್ನು ಬಂಧಕ್ಕೊಳಪಡಿಸಿದ್ದರು. ಪ್ರಕರಣ ಸಂಬಂಧ ಮೂರು ವರ್ಷಗಳ ಜೈಲು ಶಿಕ್ಷೆಗೂ ಗುರಿಯಾಗಿದ್ದ. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ನಂತರ ಖಾಸಗಿ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ.

ಈ ನಡುವೆ ಬಸ್ ನಲ್ಲಿ ಶಾಲೆಗೆ ಹೋಗುತ್ತಿದ್ದ 14 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ್ದ. ಡಿಸೆಂಬರ್ 30 ರಂದು ಬಾಲಕಿ ಶಾಲೆಗೆ ಹೋಗುವುದಾಗಿ ಪೋಷಕರಿಗೆ ಹೇಳಿ ಮನೆಯಿಂದ ಹೊರಬಂದಿದ್ದು, ಮರಳಿ ಮನೆಗೆ ಹಿಂತಿಗಿರಲಿಲ್ಲ. ಆತಂಕಗೊಂಡ ಪೋಷರು ನಾಪತ್ತೆ ಪ್ರಕರಣ ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಬಾಲಕಿಗಾಗಿ ಹುಡುಕಾಟ ನಡೆಸಿದ್ದ ಪೊಲೀಸರು ದೊಡ್ಡಬಳ್ಳಾಪುರದ ಕಟ್ಟಡ ನಿರ್ಮಾಣ ಸ್ಥಳದಿಂದ ಬಾಲಕಿಯನ್ನು ಪತ್ತೆ ಮಾಡಿ ರಕ್ಷಣೆ ಮಾಡಿದ್ದರು, ಬಳಿಕ ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದರು.

ಡಿಸೆಂಬರ್ 30 ರಂದು ಆನಂದ್ ಆಕೆಯನ್ನು ದೇವಸ್ಥಾನಕ್ಕೆ ಕರೆದೊಯ್ದಿರುವ ಆರೋಪಿ, ಆಕೆಗೆ ಮಂಗಳಸೂತ್ರವನ್ನು ಕಟ್ಟಿದ್ದಾನೆ. ನಂತರ ತನ್ನ ಸಹೋದರಿ ಹಾಗೂ ಆಕೆಯ ಪತಿ ಕೆಲಸ ಮಾಡುತ್ತಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಾಲಕಿಯ ಮೇಲೆ 5 ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆನಂದ್ ಮೇಲೆ ಅತ್ಯಾಚಾರ ಪ್ರಕರಣಗಳಷ್ಟೇ ಅಲ್ಲದೆ, ಕಳ್ಳತನ ಪ್ರಕರಣಗಳೂ ಕೂಡ ದಾಖಲಾಗಿದ್ದವು. ಇದೀಗ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT