ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ನೆಲಮಂಗಲ: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ ಹಾಗೂ ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕುಟುಂಬ ಸಂಕ್ರಾಂತಿ ಹಬ್ಬ ಆಚರಿಸಲು ಸ್ವಗ್ರಾಮಕ್ಕೆ ಹೋಗಿ ಮರಳುತ್ತಿದ್ದರು. ಸಂಕ್ರಾಂತಿ ಹಬ್ಬವನ್ನು ಮುಗಿಸಿಕೊಂಡು ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಬರುವಾಗ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಮಾಹಿತಿ ಲಭಿಸಿಲ್ಲ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ