ಅನಂತ ಕುಮಾರ್ ಹೆಗಡೆ 
ರಾಜ್ಯ

ವಿವೇಕ ಇರುವವರು ಈ ರೀತಿ ಮಾತಾಡೋಲ್ಲ, ಹೆಗಡೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಲಿ: ಡಿಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು,  ವಿವೇಕ ಇರುವವರು ಈ ರೀತಿ ಮಾತನಾಡೋಲ್ಲ,  ಮಾನಸಿಕವಾಗಿ ಸ್ಥಿರವಾಗಿರುವವರು ಹೆಗಡೆ ಅವರಂತೆ ಮಾತನಾಡುವುದಿಲ್ಲ, ತಾವು ಮಾತನಾಡಿರುವ ರೀತಿ ತಪ್ಪು ಎಂದು ಅವರು ಅರ್ಥ ಮಾಡಿಕೊಳ್ಳಬೇಕು ಅವರ ಪಕ್ಷದ ಮುಖಂಡರೇ ಅನಂತ್ ಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಮಾತನಾಡುತ್ತಿರುತ್ತಾರೆ, ಈ ನಿಟ್ಟಿನಲ್ಲಿ ಅವರ ಆರೋಗ್ಯದ ಬಗ್ಗೆ ಅವರು ಗಮನ ಕೊಡಲಿ ಎಂದು ಹೇಳಿದರು.

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣ ಎಲ್ಲಾ ಮಸೀದಿಗಳು ದೇವಸ್ಥಾನಗಳಾಗಿದ್ದವು. ಈ ಮಸೀದಿಗಳನ್ನು ಒಡೆಯುತ್ತೇವೆ. ಇದನ್ನು ಬೆದರಿಕೆ ಅಂತಾನೇ ತಿಳಿದುಕೊಳ್ಳಿ ಎಂದು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಅಲ್ಲದೆ, ಸಿಎಂ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲಿ ನಿಂದಿಸಿದ್ದರು.  ಹೆಗಡೆ ನೀಡಿರುವ ಹೇಳಿಕೆ ಅವರದೇ ಆಗಿದ್ದು, ಅದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT