ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 87 ಮಂದಿಗೆ ಪಾಸಿಟಿವ್, ಒಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಬುಧವಾರ 87 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 672ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 38 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 87 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 165 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,589 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.14ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 672 ಮಂದಿ ಮನೆ ಆರೈಕೆಗೆ ಒಳಗಾದರೆ, 24 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 3 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ರಾಜ್ಯ ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ; ಶಾಸಕರಿಗೆ ಡಿಸಿಎಂ ಗಾಳ?: ಪರಪ್ಪನ ಅಗ್ರಹಾರಕ್ಕೆ ಡಿಕೆ ಶಿವಕುಮಾರ್ ಭೇಟಿ!

ನಾನು AK 47 ಥರ, ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ ಕಟ್ಟುತ್ತೇನೆ: ಯತ್ನಾಳ್

ATM Robbery: 'ನಾನೇ ಬರ್ಬೇಕು ಅಂದ್ಕೊಡಿದ್ದೆ.. ನೀವೇ ಬಂದ್ರಿ..': ಪೊಲೀಸರ ಬಳಿ ಕಿಂಗ್ ಪಿನ್ ರವಿ ಪತ್ನಿ ಸ್ಫೋಟಕ ಹೇಳಿಕೆ, ರಿಕವರಿ ಹಣ ಏನಾಯ್ತು?

ಪ್ರವಾಸಿಗರ 'ಬೇಜವಾಬ್ದಾರಿ'ಗೆ ಚೀನಾದ ಪ್ರಸಿದ್ಧ ಪರ್ವತ ತುದಿಯ ದೇವಾಲಯ ಸುಟ್ಟು ಕರಕಲು!

SCROLL FOR NEXT