ಕೆ ಎನ್ ರಾಜಣ್ಣ 
ರಾಜ್ಯ

ಅಯೋಧ್ಯೆಯಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು, ಭಕ್ತಿಯ ವಾತಾವರಣ ಅಲ್ಲಿರಲಿಲ್ಲ: ಕೆ ಎನ್ ರಾಜಣ್ಣ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ತುಮಕೂರಿನಲ್ಲಿ ನಿನ್ನೆ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತುಮಕೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ತುಮಕೂರಿನಲ್ಲಿ ನಿನ್ನೆ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. 

ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಏಕವಚನದಲ್ಲಿ ನಿಂದಿಸಿದ್ದಕ್ಕೆ ತಿರುಗೇಟು ನೀಡಿದ ರಾಜಣ್ಣ, ಚುನಾವಣೆಗೆ ಆರು ತಿಂಗಳಿರುವಾಗ ಬಂದು ಹೀಗೆಲ್ಲ ಹೇಳಿಕೆ ಕೊಡುತ್ತಾನೆ. ನಾಲ್ಕೂವರೆ ವರ್ಷ ಮಲಗಿರುತ್ತಾನೆ. ಅದೆಲ್ಲಿರುತ್ತಾನೋ, ಈಗ ಬಂದು ಹಿಂದುತ್ವ ಹಿಂದುತ್ವ ಎಂದು ಚುನಾವಣೆ ಮುಗಿದ ನಂತರ ಪತ್ತೆ ಇರುವುದಿಲ್ಲ ಎಂದು ಟೀಕಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ