ಅನಿಲ್ ಕುಮಾರ್ 
ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ನಗರ...

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಅನಿಲ್ ಕುಮಾರ್(34) ಎಂದು ಗುರುತಿಸಲಾಗಿದ್ದು, ಕಳೆದ 12 ವರ್ಷಗಳಿಂದ ಇಲ್ಲಿನ ಸುರತ್ಕಲ್‌ನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿಯಲ್ಲಿ ಹೆಸರು ಸೇರಿಸಲು ಸಾಧ್ಯವಾಗದ ಕಾರಣ ಆಕ್ರೋಶಗೊಂಡು ಈ ವಿಡಿಯೋ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ.

ಅತ್ತಾವರದ ಸುಹಾನ್ ಆಳ್ವ ಎಂಬ ವ್ಯಕ್ತಿ ಈ ವಿಡಿಯೋ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ಭೀಕರ ದಾಳಿ; ಭಾರತೀಯ ನಾವಿಕ ಬಲಿ, ಭಾರತ ತೀವ್ರ ಖಂಡನೆ..!

26 ದಿನ ಉಪವಾಸ ಮಾಡಿದ್ದೇನೆ... ಇನ್ನೂ ನನ್ನ ಪ್ರಾಮಾಣಿಕತೆಗೆ ಸಾಕ್ಷಿ ಬೇಕೇ?; ಟೀಕಾಕಾರರಿಗೆ ಸೋನಂ ವಾಂಗ್ಚುಕ್ ತಿರುಗೇಟು

Instagramನಲ್ಲಿ 30 ಕೋಟಿ ವೀಕ್ಷಣೆ ದಾಟಿದ Video: ನಿಮ್ಮ ಪ್ರೀತಿ-ಸಲಹೆಗಳು ಹೀಗೆ ಮುಂದುವರಿಯಲಿ; ಯುವ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಇರಾನ್ ಜಲ ಪ್ರದೇಶದಲ್ಲಿ 28 ಭಾರತೀಯ ಸಿಬ್ಬಂದಿಯಿದ್ದ LPG ಟ್ಯಾಂಕರ್ ಮೇಲೆ ದಾಳಿ!