ಉದಯ ಗರುಡಾಚಾರ್ 
ರಾಜ್ಯ

ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್‌ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

 ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಸಂಜೆ ಮನೆಯಲ್ಲಿ ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತವಾಗಿದ್ದು, ಸದ್ಯ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ. ಸದ್ಯ ಶಾಸಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಪೇಟೆ ವಿಧಾನ ಸಭಾಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಉದಯ ಗರುಡಾಚಾರ್​ ಗೆಲುವು ಸಾಧಿಸಿದ್ದರು. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಹಾಗೂ ಮಾಜಿ ಶಾಸಕ ಆರ್​. ವಿ ದೇವರಾಜ್​ ವಿರುದ್ಧ ಗೆಲುವು ಸಾಧಿಸಿದ್ದರು.

ಬುಧವಾರ ಬೆಳಗ್ಗೆ ಶಾಸಕ ಉದಯ್ ಗರುಡಾಚಾರ್ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ನಡೆಯುತ್ತಿರುವ ದೇವಾಲಯಗಳ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್