ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಫೆಬ್ರವರಿ 12ರಿಂದ ವಿಧಾನಮಂಡಲ ಅಧಿವೇಶನ; ಫೆಬ್ರವರಿ 16ಕ್ಕೆ ರಾಜ್ಯ ಬಜೆಟ್ ಮಂಡನೆ

ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬ್ರವರಿ 12ರಿಂದ ಫೆಬ್ರವರಿ 23ರವರೆಗೆ ಅಧಿವೇಶನ ನಡೆಸಲು ಮತ್ತು ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡಿಸಲು ನಿರ್ಧರಿಸಲಾಗಿದೆ.

ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನ ಅಂದರೆ ಫೆಬ್ರವರಿ 12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಲೋಕಸಭೆ ಚುನಾವಣೆಗೆ ಮಾರ್ಚ್‌ನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲೇ ಬಜೆಟ್ ಮಂಡಿಸಲು ತೀರ್ಮಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT