ರಾಜ್ಯದಲ್ಲಿ ಇಂದು ಕೊರೋನಾದಿಂದ ಇಬ್ಬರು ಸಾವು; 138 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 138 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 455ಕ್ಕೆ ಇಳಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 138 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 455ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 52 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 138 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ 350 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 6837 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.01 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ 417 ಮಂದಿ ಮನೆ ಆರೈಕೆಗೆ ಒಳಗಾದರೆ, 27 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 8 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.