ರಾಜ್ಯ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ: ಜನವರಿ 23-30 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ

Srinivasamurthy VN

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆ ನಡೆಸಿದ್ದು, ಜನವರಿ 23-30 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಗುರುವಾರ ಮಾಹಿತಿ ನೀಡಿದ್ದು, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಗೆ ಸಕಲ ಸಿದ್ಧತೆ ನಡೆಸಲಾಗಿದೆ. 11,763 ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದು, 1,048 ಹೊಸ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಅಂತೆಯೇ ನಾಮಪತ್ರ ಸಲ್ಲಿಕೆ ಜನವರಿ 23 ರಿಂದ ಜನವರಿ 30 ರವರೆಗೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆ ಜನವರಿ 31 ರಂದು ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನ ಫೆಬ್ರವರಿ 2 ಆಗಿದೆ. ಮತದಾನ ಫೆಬ್ರವರಿ 16 ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ನಡೆಯಲಿದೆ. ಫೆಬ್ರವರಿ 20 ರಂದು ಮತದಾನ ನಡೆಯಲಿದ್ದು, ಫೆಬ್ರವರಿ 23 ರಂದು ಚುನಾವಣಾ ಪ್ರಕ್ರಿಯೆ ಮುಗಿಯಲಿದೆ.
 

SCROLL FOR NEXT