ರಾಜ್ಯ

ಉದ್ಯೋಗ ಮೇಳಗಳನ್ನು ಆಯೋಜಿಸಲು ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಸಮಿತಿ ರಚನೆ

Lingaraj Badiger

ಬೆಂಗಳೂರು: ನಿರುದ್ಯೋಗಿ ಯುವಕರಿಗೆ ಉದ್ಯೋಗ ಹುಡುಕಲು ಸಹಾಯ ಮಾಡಲು ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಮೆಗಾ ಉದ್ಯೋಗ ಮೇಳಗಳನ್ನು ಆಯೋಜಿಸಲು ಸಮಿತಿ ರಚಿಸಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚಿಸಿದ್ದು, ಅವರ ನೇತೃತ್ವದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ’ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

"ಈ ಸಮಿತಿಯು ಪ್ರಮುಖ, ಸಣ್ಣ ಕೈಗಾರಿಕೆಗಳು ಮತ್ತು ಸಾಫ್ಟ್‌ವೇರ್ ಕಂಪನಿಗಳ ಸಮನ್ವಯದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುತ್ತದೆ. ರಾಜ್ಯಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ನಿರುದ್ಯೋಗಿ ಯುವಕರು ಉದ್ಯೋಗಗಳನ್ನು ಕಂಡುಕೊಳ್ಳಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಸಹಾಯ ಮಾಡಲಿದೆ" ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲು ಮುಂದಾಗಿದ್ದು, ಉದ್ಯೋಗ ಮೇಳದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲು ಸಮಿತಿ ಮುಂದಾಗಿದೆ.

ಪಾಟೀಲ್ ಅವರು ಈಗಾಗಲೇ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಸೃಷ್ಟಿಸುವ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಉದ್ಯೋಗ ಮೇಳದ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರು ಐಟಿ-ಬಿಟಿ, ಬ್ಯಾಂಕಿಂಗ್ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಪ್ರಕಟಣೆ ತಿಳಿಸಿದೆ.

SCROLL FOR NEXT