ಅರುಣ್ ಯೋಗಿರಾಜ್ ಕುಟುಂಬಸ್ಥರಿಗೆ ಸನ್ಮಾನದ ಚಿತ್ರ 
ರಾಜ್ಯ

ಮೈಸೂರು: ರಾಮ ಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಕುಟುಂಬಸ್ಥರನ್ನು ಸನ್ಮಾನಿಸಿದ ಸಂಸದ ಪ್ರತಾಪ್ ಸಿಂಹ!

ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ.

ಮೈಸೂರು : ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹ ಕೆತ್ತನೆ ಮಾಡಿರುವ ಮೈಸೂರಿನ ಅರುಣ್ ಯೋಗಿ ರಾಜ್ ಕುಟುಂಬದವರಿಗೆ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಶ್ರೀವತ್ಸ ಅವರ ನೇತೃತ್ವದ ತಂಡ ಸನ್ಮಾನಿಸಿ ಗೌರವಿಸಿದ್ದಾರೆ. ಇಂದು ಮಧ್ಯಾಹ್ನ ಅರುಣ್ ಯೋಗಿರಾಜ್ ಅವರ ತಾಯಿ ಸರಸ್ವತಿ, ಸಹೋದರ ಸೂರ್ಯ ಪ್ರಕಾಶ್ ಹಾಗೂ ಪತ್ನಿ ವಿಜೇತ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಅಯೋಧ್ಯೆಗೆ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೂ ಮೈಸೂರಿಗೆ ಅವಿನಾಭವ ಸಂಬಂಧ ಉಂಟಾಗಿದೆ. ರಾಮಲಲ್ಲಾ ವಿಗ್ರಹದ ಕಲ್ಲು ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುಜ್ಜೆಗೌಡನಹುಂಡಿಯ ಹಿಂದುಳಿದ ವರ್ಗದ ಸಮುದಾಯದ ರಾಮದಾಸ್ ಎಂಬುವವರ ಜಮೀನಿನದ್ದಾಗಿದೆ. ಕೆತ್ತನೆ ಕಾರ್ಯ ಸಹ ಮೈಸೂರಿನ ಅರುಣ್ ಯೋಗಿರಾಜ್ ರವರದ್ದಾಗಿದೆ, ಮುಂದಿನ ಹಲವಾರು ಶತಮಾನಗಳ ವರೆಗೂ ಸಹ ಇವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಲಿದೆ ಎಂದರು. 

ಇದೇ 22 ರಂದು ದೇಶಾದ್ಯಂತ ಎಲ್ಲಾ ಮಂದಿರಗಳಲ್ಲಿ ಪೂಜೆ ಪುನಸ್ಕಾರಗಳು ನೆರೆವೇರುವ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾನದ ಮುಖಾಂತರ ಶ್ರೀರಾಮ ಮಂದಿರ ಉದ್ಘಾಟನೆಗೊಂಡು ಕೋಟ್ಯಂತರ ಜನರ ಕನಸು ನನಸಾಗುವ ಕ್ಷಣಗಣನೆ ಆರಂಭವಾಗಿದೆ ಎಂದು ತಿಳಿಸಿದರು. ಈ ವೇಳೆ ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹಾಗೂ ಹಲವಾರು ಬಿಜೆಪಿ ಮುಖಂಡರು ಭಾಗಿಯಾಗಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!