ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಿಜಯನಗರದ ಹೋಟೆಲ್‌ನಲ್ಲಿ ಮಹಿಳೆಗೆ 'ಲೈಂಗಿಕ ಕಿರುಕುಳ'

ಮಹಿಳಾ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಹೋಟೆಲ್‌ನ ಮ್ಯಾನೇಜರ್‌ನಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಬೆಂಗಳೂರು: ಮಹಿಳಾ ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ವಿರುದ್ಧ ಹೋಟೆಲ್‌ನ ಮ್ಯಾನೇಜರ್‌ನಿಂದ ಲೈಂಗಿಕ ಕಿರುಕುಳದ ದೂರು ದಾಖಲಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ಮಹಿಳೆ ದೂರು ನೀಡಲು ನಿರಾಕರಿಸಿದಾಗ, ಹೋಟೆಲ್‌ನೊಳಗೆ ಕ್ಯಾಶ್ ಕೌಂಟರ್ ಎದುರು ಘಟನೆ ಸಂಭವಿಸಿದ ಕಾರಣ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ವಿಜಯನಗರ ಆರ್​ಪಿಸಿ ಲೇಔಟ್​ನಲ್ಲಿರುವ ಹೋಟೆಲ್​ನಲ್ಲಿ 2023 ಡಿಸಂಬರ್ 30 ರ ಸಂಜೆ 7.30ಕ್ಕೆ ಈ ಘಟನೆ ನಡೆದಿತ್ತು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದು, 2024ರ ಜನವರಿ 10 ರಂದು ಈ ಘಟನೆ ಸಂಬಂಧ ಎಫ್ಐಆರ್ ದಾಖಲಾಗಿದೆ.

ಆಕೆ ಕ್ಯಾಶ್ ಕೌಂಟರ್ ಬಳಿ ನಿಂತಿದ್ದಾಗ ಆರೋಪಿಗಳು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೋಟೆಲ್‌ಗೆ ಬಂದ ಯುವತಿ ಜೊತೆಗೆ ಒಬ್ಬ ಅನುಚಿತ ವರ್ತನೆ ತೋರಿದ್ದಾರೆ. ಓರ್ವ ಕಾಮುಕ ಯುವತಿಯ ಹಿಂಬದಿಗೆ ಕೈನಿಂದ ಹೊಡೆದು ವಿಕೃತಿ ಮೆರೆದಿದ್ದಾನೆ. ಇದನ್ನು ಅಲ್ಲೇ ಇದ್ದ ಉಳಿದಿಬ್ಬರು ನೋಡಿ ಖುಷಿ ಪಟ್ಟಿದ್ದಾರೆ. ಆರೋಪಿಯ ವರ್ತನೆ ಕಂಡು ಕೋಪಗೊಂಡ ಯುವತಿ ಗಲಾಟೆ ಮಾಡಿ ಕೂಗಾಡಿದ್ದಾರೆ. ಕೂಡಲೇ ಸ್ಥಳೀಯರು ಜಮಾಯಿಸಿದ್ದು, ಮೂವರು ಯುವಕರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಘಟನೆ ಹೊಟೇಲ್‌ನ ಸಿಸಿಟಿವಿಯಲ್ಲಿ ಸೆರೆಯಾಗಿ ವೈರಲ್ ಆಗಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಮಹಿಳೆ ಆರೋಪಿಗಳೊಂದಿಗೆ ಜಗಳವಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿಗಳ ವಿವರಗಳನ್ನು ಪಡೆಯಲಾಗಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ತಿಳಿಸಿದ್ದಾರೆ.ಸಂತ್ರಸ್ತೆ ದೂರು ನೀಡಲು ನಿರಾಕರಿಸಿದ್ದಾರೆ ಆದರೆ ದೂರು ಸಲ್ಲಿಸಲು ಮ್ಯಾನೇಜರ್ ಗೆ ಹೇಳಲಾಗಿತ್ತು ಎಂದು ಅವರು ಹೇಳಿದರು. ಈ ಸಂಬಂಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT