ಬಿಬಿಎಂಪಿ 
ರಾಜ್ಯ

ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: 35 ಸಾವಿರ ಅಂಗಡಿಗಳಿಗೆ BBMP ನೋಟಿಸ್

ಸಿಲಿಕಾನ್ ಸಿಟಿ ಬೆಂಗಳೂರಿನ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿರುವ ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 35 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿರುವ ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 35 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.

ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಫೆಬ್ರವರಿಯೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕು.

ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಬಿಬಿಎಂಪಿಗೆ ಸೂಚಿಸಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, 35 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ. 

ಈ ಕುರಿತು ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಸಿರಾಜ್ ಅಹಮದ್ ಮದನಿ ಮಾತನಾಡಿ, ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಎಂಟು ಬಿಬಿಎಂಪಿ ವಲಯಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅಧಿಕಾರಿಗಳು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ, ನಿಯಮ ಪಾಲಿಸುವಂತೆ ಸೂಚಿಸಿದ್ದಾರೆ. ಫೆ.೨೮ರ ನಂತರವೂ ನಿಯಮ ಪಾಲನೆ ಮಾಡದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಎಲ್ಲಾ ಎಂಟು ವಲಯಗಳಲ್ಲಿರುವ ಸುಮಾರು 35 ಸಾವಿರ ಅಂಗಡಿ ಮಾಲೀಕರಿಗೆ ನೋಟಿಸ್ಗಳನ್ನು ನೀಡಲಾಗಿದೆ. ನೋಟಿಸ್ ಬಳಿಕವೂ ಆದೇಶವನ್ನು ಅನುಸರಿಸದ ಅಂಗಡಿಗಳನ್ನು ಬಂದ್ ಮಾಡಿಸುವುದು ಅಥವಾ ಲೈಸೆನ್ಸ್ ರದ್ದುಪಡಿಸುವ ಕುರಿತು ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.

ಹೊಟೆಲ್ ಮಾಲೀಕರಲ್ಲಿ ಗೊಂದಲ
ಬಿಬಿಎಂಪಿ ಆದೇಶ ಇದೀಗ ಹೊಟೆಲ್ ಮಾಲೀಕರಲ್ಲಿ ಗೊಂದಲಕ್ಕೆ ಕಾರಣವಾಗಿದ್ದು, ಕೇವಲ ಹೊರಗಿನ ಬೋರ್ಡ್‌ನಲ್ಲಿ ಕನ್ನಡ ಹಾಕಿದ್ರೆ ಸಾಕಾ..? ಅಥವಾ ಮೆನು ಬೋರ್ಡ್‌ ಕೂಡ ಬದಲಾವಣೆ ಮಾಡ್ಬೇಕಾ? ಅನ್ನೋ ಬಗ್ಗೆ ಹೋಟೆಲ್‌ ಮಾಲೀಕರ ಸಂಘ ಬಿಬಿಎಂಪಿಗೆ ಪತ್ರ ಬರೆದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT