ಸಿಎಂ ಸಿದ್ದರಾಮಯ್ಯ 
ರಾಜ್ಯ

ಒಳ ಮೀಸಲಾತಿ ಪರಿಶೀಲನೆಗೆ ಸಮಿತಿ ರಚಿಸಿದ ಕೇಂದ್ರ; ದಲಿತರ ದಾರಿ ತಪ್ಪಿಸುವ ಕುತಂತ್ರ ಎಂದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ...

ಬೆಂಗಳೂರು: ಕೇಂದ್ರ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ಪರಿಶೀಲನೆ ನಡೆಸಲು ಸಂಪುಟ ಕಾರ್ಯದರ್ಶಿರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಇದು ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ಸಂಪುಟ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿರುವುದು "ದಲಿತ ಸಮುದಾಯದ ದಾರಿ ತಪ್ಪಿಸುವ ಕುತಂತ್ರವಷ್ಟೇ". ಇದರ ಹಿಂದೆ ಯಾವುದೇ ಪ್ರಾಮಾಣಿಕವಾದ ಕಾಳಜಿ ಇಲ್ಲ ಎಂದಿದ್ದಾರೆ.

ಇದೇ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ಉಷಾ ಮೆಹ್ರಾ ಆಯೋಗ ಕೂಡಾ ಅಂತಿಮವಾಗಿ ಪರಿಶಿಷ್ಟಜಾತಿಗಳ ಉಪವರ್ಗೀಕರಣ ಮಾಡಿ ಒಳಮೀಸಲಾತಿ ನೀಡಲು ಸಂವಿಧಾನ ತಿದ್ದುಪಡಿಯೊಂದೇ ಪರಿಹಾರ ಎಂದು ವರದಿ ನೀಡಿತ್ತು. ಆಂಧ್ರ ಪ್ರದೇಶದ ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಬಗ್ಗೆ ಅಧ್ಯಯನ ನಡೆಸಿದ್ದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು. ಹೀಗಿರುವಾಗ ಇದಕ್ಕೆ ಇನ್ನೊಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸುವ ಅಗತ್ಯವಾದರೂ ಏನಿದೆ? ಇದು ಕೇವಲ ‘‘ಸಮಯ ಕೊಲ್ಲುವ’’ ತಂತ್ರ ಅಷ್ಟೇ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕೆಂಬ ಪ್ರಾಮಾಣಿಕ ಉದ್ದೇಶ ಕೇಂದ್ರ 
ಸರ್ಕಾರಕ್ಕೆ ಇದ್ದರೆ ಸಂವಿಧಾನ 341ನೇ ಪರಿಚ್ಛೇದಕ್ಕೆ ತಿದ್ದುಪಡಿ ಮಾಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಿ ಅಂಗೀಕಾರ ಪಡೆಯಬೇಕು ಮತ್ತು ಶೀಘ್ರವಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಎಷ್ಟೇ ಉನ್ನತ ಮಟ್ಟದ ಸಮಿತಿಗಳನ್ನು ರಚಿಸಿದರೂ ಅವುಗಳು ಸಂವಿಧಾನವನ್ನು ಮೀರಿ ಯಾವ ಶಿಫಾರಸನ್ನೂ ಮಾಡಲು ಸಾಧ್ಯವೇ ಇಲ್ಲ. ಸಂವಿಧಾನದ ಪರಿಚ್ಚೇದ 341(1) ಮತ್ತು (2) ರ ಪ್ರಕಾರ ಪರಿಶಿಷ್ಟ ಜಾತಿಯ ಪಟ್ಟಿಗೆ ಹೊಸ ಜಾತಿಗಳನ್ನು ಸೇರಿಸುವುದಾಗಲಿ ಇಲ್ಲವೇ ಯಾವುದಾದರೂ ಜಾತಿಯನ್ನು ಹೊರಗೆ ತೆಗೆಯಲು ಸಂವಿಧಾನಕ್ಕೆ ತಿದ್ದುಪಡಿ ಅಗತ್ಯವಾಗಿದೆ ಎನ್ನುವುದು ಸಂವಿಧಾನದ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿದವರಿಗೆ ತಿಳಿದಿರುವ ಸರಳ ಸತ್ಯ. ಸಂವಿಧಾನದ ಮೇಲೆ ನಂಬಿಕೆಯೇ ಇಲ್ಲದ ಬಿಜೆಪಿ ಸಂವಿಧಾನವನ್ನೇ ಉಲ್ಲಂಘಿಸಲು ಹೊರಟ ಹಾಗೆ ಕಾಣುತ್ತಿದೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT