ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಜವರಾಯನ ರೂಪದಲ್ಲಿ ಬಂದ ಲಾರಿ; ನಾಳೆ ನಿಶ್ಚಿತಾರ್ಥದ ಖುಷಿಯಲ್ಲಿದ್ದ ಕೃಷಿ ಅಧಿಕಾರಿ ಸಾವು!

ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಿರುಮಲ ಡಾಬಾ ಬಳಿ ನಡೆದಿದೆ.

ಚಿತ್ರದುರ್ಗ: ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಿರುಮಲ ಡಾಬಾ ಬಳಿ ನಡೆದಿದೆ.

ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ವಿಶಾಲ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಶಾಲ್ ಕುಮಾರ್ ಹೊಳಲ್ಕೆರೆಯಲ್ಲಿ ಕೆಲಸ ಮಾಡುತ್ತಿದ್ದರು. ಕಾರಲ್ಲಿ ಬರುವಾಗ ಎದುರಿಗೆ ಬಂದ ಲಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಡಿಕ್ಕಿ ಹೊಡೆದ ರಭಸಕ್ಕೆ ವಿಶಾಲ್‌ ತಲೆಗೆ ಗಂಭೀರ ಪೆಟ್ಟಾಗಿತ್ತು. ತೀವ್ರ ರಕ್ತಸ್ರಾವದಿಂದ ವಿಶಾಲ್‌ ಉಸಿರು ಚೆಲ್ಲಿದ್ದಾರೆ.

ನಾಳೆ ಮದುವೆಯ ನಿಶ್ಚಿತಾರ್ಥ ಮಾಡಿಕೊಂಡು ಸುಖ ಸಂಸಾರ ನಡೆಸುವ ಕನಸು ಕಾಣುತ್ತಿದ್ದರು. ಹೊಳಲ್ಕೆರೆ ಕೃಷಿ ಇಲಾಖೆಯಲ್ಲಿ (ತಾಂತ್ರಿಕ) ಕಾರ್ಯ ನಿರ್ವಹಿಸುತ್ತಿದ್ದ ವಿಶಾಲ್ ಕುಮಾರ್ ಅವರು ಎಂದಿನಂತೆ ಚಿತ್ರದುರ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ಕರ್ತವ್ಯ ನಿಮಿತ್ತ ಹೋಗುತ್ತಿದ್ದಾಗ ಶನಿವಾರ ಬೆಳಿಗ್ಗೆ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಲಾರಿ ಡಿಕ್ಕಿ ಹೊಡೆದಿದೆ.

ಅಫಘಾತದ ರಭಸಕ್ಕೆ ಕಾರಿನಲ್ಲಿದ್ದ ವಿಶಾಲ್ ಕುಮಾರ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ. ನಾಳೆ ವಿಶಾಲ್ ಕುಮಾರ್ ಅವರ ನಿಶ್ಚಿತಾರ್ಥ ನಿಶ್ಚಯವಾಗಿತ್ತು ಎಂದು ಮೂಲಗಳಿಂದ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್