ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೀನ್ಯಾ ಮೂಲದ ಮಹಿಳೆ ಬಂಧನ; 26 ಕೋಟಿ ರೂ. ಮೌಲ್ಯದ ಕೊಕೇನ್‌ ವಶ!

Vishwanath S

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂಪಾಯಿ ಮೌಲ್ಯದ ಕೊಕೇನ್‌ನೊಂದಿಗೆ ಕೀನ್ಯಾ ಮೂಲದ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಬಂಧಿಸಿದೆ.

ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು 2.6 ಕೆಜಿ ಕೊಕೈನ್ ಸಮೇತ ಮಹಿಳೆಯನ್ನು ಬಂಧಿಸಿದ್ದಾರೆ.

ಪ್ರವಾಸಿ ವೀಸಾ ಮೆರೆಗೆ ಭಾರತಕ್ಕೆ ಬಂದಿದ್ದ ಕೀನ್ಯಾ ಮೂಲದ 36 ವರ್ಷದ ಮಹಿಳೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಮೂಲಕ ದೆಹಲಿಗೆ ತೆರಳಲು ಚೆಕ್ ಇನ್ ಆಗುತ್ತಿದ್ದಾಗ ಬಂಧಿಸಲಾಗಿದೆ.

ಕೊಕೈನ್ ಸಮೇತ ಮಹಿಳೆಯನ್ನ ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿನ ಡಿಆರ್‌ಐ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

SCROLL FOR NEXT