ಸಂಗ್ರಹ ಚಿತ್ರ 
ರಾಜ್ಯ

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ: ಅರ್ಧ ದಿನ ರಜೆಗೆ ಸಿಎಂ ಸಿದ್ದರಾಮಯ್ಯಗೆ ಎಎಬಿ ಮನವಿ

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಅರ್ಧ ಅಥವಾ ಪೂರ್ತಿ ದಿನ ರಜೆ ಘೋಷಿಸುವಂತೆ ಬೆಂಗಳೂರು ವಕೀಲರ ಸಂಘವು (ಎಎಬಿ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ.

ರಾಜ್ಯದ ಜನರು ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮ ವೀಕ್ಷಿಸಲು ಕಾತರರಾಗಿದ್ದಾರೆ. ಕೇಂದ್ರ ಸರ್ಕಾರವು ಇದಾಗಲೇ ಜನವರಿ 22ರಂದು ಅರ್ಧ ದಿನ ರಜೆ ಘೋಷಣೆ ಮಾಡಿದೆ. ಈ ನೆಲೆಯಲ್ಲಿ ತಾವೂ ಸಹ ರಾಜ್ಯದ ಜನರ ಭಾವನೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಕೋರಲಾಗಿದೆ.

ತನ್ನ ಆದರ್ಶಯುತ ಬದುಕಿನ ಮೂಲಕ ಭಾರತ ಸಮಾಜವನ್ನು ಪ್ರಭಾವಿಸಿರುವ ರಾಮದೇವರ ಪ್ರಭಾವಕ್ಕೆ ರಾಜ್ಯದ ಬಹುತೇಕ ಜನರು ಒಳಗಾಗಿದ್ದಾರೆ ಎಂದು ಎಎಬಿ ಅಧ್ಯಕ್ಷ ವಿವೇಕ್‌ ಸುಬ್ಬಾರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT