ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ- ಸಿಎಂ ಸಿದ್ದರಾಮಯ್ಯ

ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ 'ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರು: ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ 'ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ ರತ್ನ, ಶತಾಯುಷಿ ಡಾ. ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ" ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದರು. 

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ.‌ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯವಾಗಿದೆ ಎಂದರು. 

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ. ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT