ಸಿ.ಎಂ.ಇಬ್ರಾಹಿಂ 
ರಾಜ್ಯ

ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ಸಿ.ಎಂ.ಇಬ್ರಾಹಿಂಗೆ ಕೋರ್ಟ್ ಶಾಕ್!

ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ನ್ಯಾಯಾಲಯ ಶಾಕ್ ನೀಡಿದ್ದು, ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ದೇವೇಗೌಡ ಕುಟುಂಬದ ವಿರುದ್ಧವೇ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರಿಗೆ ಈ ಮೂಲಕ ಹಿನ್ನಡೆಯಾಗಿದೆ.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.

ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇದರ ವಿರುದ್ಧ ಪಕ್ಷದ ಅಧ್ಯಕ್ಷರಾಗಿದ್ದ ಸಿ ಎಂ ಇಬ್ರಾಹಿಂ ಬಂಡಾಯವೆದ್ದಿದ್ದರು. ಬಳಿಕ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಉಚ್ಚಾಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ, ಎಚ್​​.ಡಿ.ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಅವರನ್ನ ಪ್ರತಿವಾದಿಯಾಗಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷ ನೇಮಕ ಕಾನೂನು ಬಾಹಿರವಾಗಿದ್ದು, ಅನೂರ್ಜಿತಗೊಳಿಸಿ ಅಂತ ಮನವಿ ಮಾಡಿದ್ದರು.

ಹೆಚ್ ​​​ಡಿ ದೇವೇಗೌಡರಿಗೆ ಪರ್ಯಾಯವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ‌.ಕೆ ನಾಣು ಅವರನ್ನು ಸಿ ಎಂ ಇಬ್ರಾಹೀಂ ಆಯ್ಕೆ ಮಾಡಿದ್ದರು. ಅಲ್ಲದೇ, ತೆನೆ ಹೊತ್ತ ಮಹಿಳೆ ಗುರುತು ನಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ