ರಾಮು 
ರಾಜ್ಯ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಯುವಕ ಸಾವು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾರೆ.

ಮೃತ ಯುವಕನನ್ನು ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರಾಮು(26) ಎಂದು ಗುರುತಿಸಲಾಗಿದೆ.

ಹೋರಿ ಬೆದರಿಸುವ ಸ್ಪರ್ಧೆ ವೀಕ್ಷಣೆಗೆ ಬಂದಿದ್ದ ರಾಮು, ಹೋರಿ ಕುತ್ತಿಗೆಗೆ ತಿವಿದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸ್ನೇಹಿತರು ಕರೆದೊಯ್ದಿದ್ದರು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಯುವಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.

ಈ ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಕೂಡ ಇದೇ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ವರ್ಧೆಯಲ್ಲಿ ಹೋರಿ ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ ಕೋರಿದ ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?

ಪತ್ರಕರ್ತ ಜಿ. ಮಹಂತೇಶ್ ಗೆ ಜೀವ ಬೆದರಿಕೆ: FIR ದಾಖಲು!

ಬೆಂಗಳೂರಿನ ಗುಂಡಿ ಮುಚ್ಚಲು 'ಜೆಟ್ ಪ್ಯಾಚರ್': ಪ್ರಾಯೋಗಿಕ ಕಾರ್ಯಾಚರಣೆ!

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ