ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ ಒಬ್ಬರು ಸಾವು; 161 ಮಂದಿಗೆ ಪಾಸಿಟಿವ್

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಸೋಮವಾರ 161 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 528ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 79 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 161 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 129 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 4967 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.24 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 502 ಮಂದಿ ಮನೆ ಆರೈಕೆಗೆ ಒಳಗಾದರೆ, 22 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

SCROLL FOR NEXT