ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ಬಿ. ವೀರಪ್ಪ ಸಮಿತಿ ಆಯೋಗ 
ರಾಜ್ಯ

ಪಿಎಸ್ಐ ನೇಮಕಾತಿ ಅಕ್ರಮ: ನ್ಯಾ. ಬಿ.ವೀರಪ್ಪ ಸಮಿತಿ ಆಯೋಗದಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ

ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ. ವೀರಪ್ಪ ಅವರು ತಮ್ಮ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಲ್ಲಿಸಿದರು.

ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.

ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.

ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್​ರನ್ನು ಬಂಧಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT