ರಾಜ್ಯ

ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಘೋಷಣೆ: ಸಿಎಂ ಸಿದ್ದರಾಮಯ್ಯ ಕೊಂಡಾಡಿದ ಬಿ.ಎಸ್.ಯಡಿಯೂರಪ್ಪ

Manjula VN

ತುಮಕೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೊಂಡಾಡಿದ್ದಾರೆ.

ಡಾ. ಶಿವಕುಮಾರ ಶಿವಮೂರ್ತಿ ಶಿವಯೋಗಿ ಅವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೊದಲಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

ಶರಣ ಶ್ರೇಷ್ಠ ಬಸವಣ್ಣ ನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸವಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತೇನೆಂದು ಹೇಳಿದರು.

ಇದೇ ವೇಳೆ ನಿರ್ದಿಷ್ಟ ಸಮುದಾಯವನ್ನು ಓಲೈಸದೆ, ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡುವಂತೆ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ ಸಹೋದ್ಯೋಗಿಗಳಿಗೆ ಸಲಹೆ ನೀಡಿದರು.

ಹೊರಗಿನವರಿಂದ ಹಿಂದೂಗಳ ಮೇಲಾದ ಇಷ್ಟೊಂದು ದಾಳಿ ಬಹುಶಃ ಯಾವುದೇ ಧರ್ಮವೂ ಎದುರಿಸಿಲ್ಲ ಎಂದೆನಿಸುತ್ತದೆ. ಈ ಸಂದರ್ಭದಲ್ಲಿ ಅಹಿಂಸೆಯೆಂಬ ಹಿಂದೂ ಧರ್ಮದ ಸಾರವನ್ನು ಉಳಿಸಿಕೊಂಡಿರುವ ಧಾರ್ಮಿಕ ಮುಖಂಡರನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ‘ಸ್ಮೃತಿವನ’ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಸಂವಿಧಾನ ದೇಶದ ಧಾರ್ಮಿಕ ಗ್ರಂಥವಿದ್ದಂತೆ ಎಂದರು.

ಬಳಿಕ ಶ್ರೀ ಶಿವಕುಮಾರ ಸ್ವಾಮೀಜಿಯವರ ಕೊಡುಗೆಯನ್ನು ಸ್ಮರಿಸಿದ ಸಿಎಂ, ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಹೇಳಿದರು.

“ಶಿವಕುಮಾರ ಸ್ವಾಮೀಜಿ ಅವರು ಜನಸಾಮಾನ್ಯರಿಗೆ ಶಿಕ್ಷಣ ನೀಡಲು ‘ಅಕ್ಷರ’ ಸಂಸ್ಕೃತಿಯ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರಲು ತಮ್ಮ ಜೀವನದುದ್ದಕ್ಕೂ ಶ್ರಮಿಸಿದರು. ಆದ್ದರಿಂದ ಅವರ ಕಾಳಜಿ, ಕಾರ್ಯಗಳು ಈ ಮಣ್ಣಿನಲ್ಲಿ ಶಾಶ್ವತವಾಗಿ ಉಳಿಯುತ್ತವೆ ಎಂದರು.

SCROLL FOR NEXT