ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ 
ರಾಜ್ಯ

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಚುನಾವಣೆ: ಡಿಕೆ.ಶಿವಕುಮಾರ್

ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳನ್ನು ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಮಂಗಳವಾರ ಹೇಳಿದರು.
 
ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಡ್ಡಿಪಡಿಸಿದ್ದರ ವಿರುದ್ಧ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮೊದಲು ಲೋಕಸಭಾ ಚುನಾವಣೆ ನಡೆಯಲಿದೆ. ಈ ಚುನಾವಣೆ ಪೂರ್ಣಗೊಂಡ ಒಂದು ಅಥವಾ ಎರಡು ತಿಂಗಳುಗಳಲ್ಲಿ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿವೆ. ಕಾರ್ಯಕರ್ತರು ಸಿದ್ಧರಾಗಿರಬೇಕು ಎಂದು ಹೇಳಿದರು.

ನಾವು 225 ವಾರ್ಡ್ ಗಳನ್ನು ರಚಿಸಿದ್ದೇವೆ. ಸಂಘಟನೆಯ ಆಧಾರದ ಮೇಲೆ ನ್ಯಾಯ ಒದಗಿಸಲಾಗುವುದು. ಕಾರ್ಯಕರ್ತರಿಗೂ ಅಧಿಕಾರ ನೀಡಲಾಗುವುದು. ಅದು ನಮ್ಮ ಕರ್ತವ್ಯ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. "ಬೆಂಗಳೂರಿನಲ್ಲಿ ನಾಲ್ಕು ಸ್ಥಾನಗಳಿದ್ದು, ಬೂತ್ ಮಟ್ಟದ ಏಜೆಂಟರನ್ನು ನೇಮಿಸಬೇಕು. ಪ್ರತಿ ಬೂತ್‌ನ ಏಜೆಂಟರು ಮನೆಗಳಿಗೆ ಹೋಗಿ. ಮತದಾರರ ಪಟ್ಟಿಗಳಲ್ಲಿನ ಅಕ್ರಮಗಳ ಬಗ್ಗೆ ತಿಳಿಸಬೇಕು. ಮತದಾರರ ಸಂಖ್ಯೆ ಹಲವಾರು ಲಕ್ಷಗಳಷ್ಟು ಹೆಚ್ಚಾಗಿದೆ. ಇದರ ನೈಜತೆ ಕುರಿತು ನಾನೂ ಪರಿಶೀಲನೆ ನಡೆಸುತ್ತೇನೆಂದು ಹೇಳಿದರು.

ಫೆಬ್ರವರಿ 16 ರಂದು ನಡೆಯಲಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮಾಜಿ ಎಂಎಲ್ ಸಿ ಪುಟ್ಟಣ್ಣ ಅವರು ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಇದೇ ವೇಳೆ ಶಿವಕುಮಾರ್ ಅವರು ತಿಳಿಸಿದರು.

ಪುಟ್ಟಣ್ಣ ನಮ್ಮ ಅಭ್ಯರ್ಥಿ, ನೀವು ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರನ್ನು ಭೇಟಿ ಮಾಡಬೇಕು, ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಇದೇ ವೇಳೆ ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT