ಡಿಕೆ.ಶಿವಕುಮಾರ್ 
ರಾಜ್ಯ

ಸರ್ಕಾರ ಮಾನವೀಯತೆ ಎತ್ತಿ ಹಿಡಿಯುತ್ತಿದ್ದು, ಎಲ್ಲರಿಗೂ ನ್ಯಾಯವನ್ನು ಖಾತರಿಪಡಿಸುತ್ತದೆ: ಡಿಸಿಎಂ ಡಿಕೆ.ಶಿವಕುಮಾರ್

ನಮ್ಮದು ಎಲ್ಲಾ ಜಾತಿ, ಧರ್ಮ, ವರ್ಗಗಳ ರಕ್ಷಣೆಗಾಗಿ ಇರುವ ಸರ್ಕಾರ. ಸಮಾಜದಲ್ಲಿ ಸೋದರತ್ವ ಭಾವನೆ ಮುಂದುವರೆಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ಮಂಗಳೂರು: ನಮ್ಮದು ಎಲ್ಲಾ ಜಾತಿ, ಧರ್ಮ, ವರ್ಗಗಳ ರಕ್ಷಣೆಗಾಗಿ ಇರುವ ಸರ್ಕಾರ. ಸಮಾಜದಲ್ಲಿ ಸೋದರತ್ವ ಭಾವನೆ ಮುಂದುವರೆಯಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದರು.

ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಮೈದಾನದಲ್ಲಿ ನಡೆದ ಸುನ್ನಿ ಯುವಜನ ಸಂಘಟನೆಯ 30ನೇ ವರ್ಷದ ಮಹಾಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು ಮಾತನಾಡಿದರು.

ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಕೆದಕುವ ಮೂಲಕ ರಾಜಕೀಯದಲ್ಲಿ ತೊಡಗಿದ್ದಾರೆ. ಆದರೆ, ಜನರ ಹೊಟ್ಟೆ ತುಂಬಿಸುವತ್ತ ನಾನು ಕೆಲಸ ಮಾಡುತ್ತಿದ್ದೇವೆ. ನಾವು ಮಾನವೀಯತೆಯನ್ನು ಎತ್ತಿ ಹಿಡಿದಿದ್ದೇವೆ. “ದೇಶವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನೀವು ನಮಗೆ ಅಧಿಕಾರ ಕೊಟ್ಟಿದ್ದೀರಿ. ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಪ್ರವಾದಿಗಳು ಹಾಕಿದ ತಳಹದಿಯ ಮೇಲೆ ನಾವು ಬದುಕುತ್ತಿದ್ದೇವೆ. ಯುವಜನತೆ ದೇಶದ ಆಸ್ತಿ. ಸಂಪ್ರದಾಯ, ಆಚಾರ-ವಿಚಾರಗಳಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ನಿಮಗಾಗಿ ಒಂದು ನಿಲುವು ತೆಗೆದುಕೊಳ್ಳುವ ಮೂಲಕ ನಾವು ನಿಮ್ಮನ್ನು ರಕ್ಷಿಸುತ್ತೇವೆ. ಮುಸ್ಲಿಮರನ್ನು ನನ್ನ ಸಹೋದರರು ಎಂದು ಹೇಳಿದ್ದಕ್ಕಾಗಿ ನನ್ನನ್ನು ಟೀಕಿಸಲಾಯಿತು. ಆದರೆ, ಈ “ಕನಕಪುರ ಬಂಡೆ” ಅದಕ್ಕೆ ಹೆದರುವುದಿಲ್ಲ ಎಂದು ತಿಳಿಸಿದರು.

''ಚುನಾವಣೆ ಹತ್ತಿರ ಬರುತ್ತಿದೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ, ನಾವು ದೇಶವನ್ನು ರಕ್ಷಿಸಬೇಕಾಗಿದೆ. ಎಲ್ಲರೂ ಸರ್ಕಾರಕ್ಕೆ ಆಶೀರ್ವಾದ ಮಾಡಬೇಕು. ನಾವು ನಿಮ್ಮೊಂದಿಗೆ ಇದ್ದೇವೆ. ಅನುದಾನದ ಕುರಿತು ಮುಖ್ಯಮಂತ್ರಿ ಜತೆ ಮಾತನಾಡುತ್ತೇನೆ ಎಂದರು.

ಇದೇ ವೇಳೆ ಹಿಂದಿನ ಸರಕಾರ ವಿದ್ಯಾರ್ಥಿಗಳಿಗೆ ಜಾರಿಗೆ ತಂದಿರುವ ವಸ್ತ್ರ ಸಂಹಿತೆಯನ್ನು ಹಿಂಪಡೆಯಬೇಕು ಎಂದು ಸುನ್ನಿ ಯುವಜನ ಸಂಘ ಆಗ್ರಹಿಸಿತು.

ಅಲ್ಲದೆ, 2019ರಲ್ಲಿ ಮಂಗಳೂರಿನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟ ನೌಸೀನ್ ಕುದ್ರೋಳಿ ಮತ್ತು ಜಲೀಲ್ ಬೆಂಗ್ರೆ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಕುಟುಂಬಗಳ ವಿರುದ್ಧ ದಾಖಲಿಸಿರುವ ನಕಲಿ ಪ್ರಕರಣಗಳನ್ನು ಹಿಂಪಡೆಯಬೇಕು. ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಎಲ್ಲ ಜಾತಿಗೆ ಸೇರಿದ ಅಮಾಯಕ ಸಂತ್ರಸ್ತರನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT