ಬಸವರಾಜ ಹೊರಟ್ಟಿ 
ರಾಜ್ಯ

ಒಂದೇ ಕ್ಷೇತ್ರದಿಂದ 8ನೇ ಬಾರಿಗೆ ಪರಿಷತ್‌ಗೆ ಆಯ್ಕೆ: ಬಸವರಾಜ ಹೊರಟ್ಟಿಗೆ ಲಿಮ್ಕಾ ದಾಖಲೆ ಗರಿ!

ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ಬೆಂಗಳೂರು: ಒಂದೇ ಕ್ಷೇತ್ರದಿಂದ ಸತತವಾಗಿ ಎಂಟನೇ ಬಾರಿಗೆ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ವಿಶ್ವ ದಾಖಲೆ ಪುಸ್ತಕಕ್ಕೆ ಸೇರಿದೆ.

ಬಸವರಾಜ ಹೊರಟ್ಟಿ ಅವರು ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾಗಿ ಕಳೆದ 43 ವರ್ಷಗಳಿಂದ ವಿಧಾನ ಪರಿಷತ್ತಿನ (MLC) ಸದಸ್ಯರಾಗಿದ್ದಾರೆ. ಭಾರತದ ರಾಜಕೀಯಕ್ಕೆ ಸಂಬಂಧಿಸಿದಂತೆ ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್ಸ್‌ ಸಂಸ್ಥೆಯು ಪ್ರಕಟಿಸಿರುವ ಪುಸ್ತಕದಲ್ಲಿ ದೀರ್ಘಾವಧಿಗೆ ಚುನಾಯಿತ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸಿರುವ ಮೂವರು ರಾಜಕಾರಣಿಗಳ ಹೆಸರುಗಳನ್ನು ಪ್ರಕಟಿಸಲಾಗಿದೆ.

ಶಿಕ್ಷಕ ವೃತ್ತಿಯಿಂದ ರಾಜಕಾರಣಿಯಾಗಿ ಪರಿವರ್ತನೆಗೊಂಡ ಅವರು ಹಲವು ವರ್ಷಗಳಿಂದ ಜೆಡಿಎಸ್‌ನಲ್ಲಿದ್ದರು ಮತ್ತು ಮೇ 10 ರ ವಿಧಾನಸಭಾ ಚುನಾವಣೆಯ ಮೊದಲು ಬಿಜೆಪಿಗೆ ಸೇರಿದ್ದರು. ಆದರೆ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಹೊರಟ್ಟಿ ಅವರು 1980ರಿಂದ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಬುಧವಾರದವರೆಗೆ 43 ವರ್ಷ 201 ದಿನಗಳ ಕಾಲ ಒಂದೇ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಈ ದಾಖಲೆ ನಿರ್ಮಿಸಿರುವುದಕ್ಕಾಗಿ ಅವರ ಹೆಸರನ್ನು ಲಿಮ್ಕಾ ದಾಖಲೆ ಪುಸ್ತಕದಲ್ಲಿ ಸೇರಿಸಲಾಗಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಅವರು 11 ಬಾರಿ ವಿಧಾನಸಭೆಗೆ ಚುನಾಯಿತರಾಗಿದ್ದರು, ಆದರೆ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾಗಿದ್ದರು. ಆದರೆ ಹೊರಟ್ಟಿಯವರು 1980ರಿಂದ ಇಲ್ಲಿಯವರೆಗಿನ ಎಲ್ಲಾ ಚುನಾವಣೆಗಳಲ್ಲಿ ಒಂದೇ ಕ್ಷೇತ್ರದಿಂದ ಗೆದ್ದಿರುವುದು ದಾಖಲೆಯಾಗಿದೆ.

 ವರ್ಷ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಹೆಸರನ್ನು ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿಯಾಗಿ ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ಇಲಾಖೆಯ ಪ್ರಕಟಣೆ ತಿಳಿಸಿದೆ, ಅವರು 24 ವರ್ಷ ಮತ್ತು 165 ದಿನಗಳ ಕಾಲ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.

ಜ್ಯೋತಿ ಬಸು ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ 23 ವರ್ಷ 137 ದಿನಗಳ ಕಾಲ ಸೇವೆ ಸಲ್ಲಿಸಿದ್ದಾರೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ಒಂದು ರೂಪಾಯಿಗೆ ಒಂದು ಲೀಟರ್ ಹಾಲು!: ಬಮುಲ್ ಅಧ್ಯಕ್ಷ DK Suresh ಹೇಳಿದ್ದೇನು?

IPL 2026: ಪಂದ್ಯಾವಳಿಗೂ ಮುನ್ನವೇ RCB ಹೀನಾಯ ದಾಖಲೆ ತೋರಿಸಿ ಕೆಣಕಿದ KKR; ಕೆರಳಿದ ಆರ್​ಸಿಬಿ ಅಭಿಮಾನಿಗಳು, Video!

ಮದುವೆ ರದ್ದಾದ ನಂತರ ತನ್ನ ರಕ್ತವನ್ನೇ ಯುವತಿಗೆ ಇಂಜೆಕ್ಟ್ ಮಾಡಿದ HIV ಸೋಂಕಿತ ಯುವಕನ ಬಂಧನ!

ಮುಸ್ಲಿಂ ಯುವತಿಯೊಂದಿಗೆ ಲವ್, ಮದುವೆ ಬೇಡ ಅಂದಿದ್ದಕ್ಕೆ 84 ಬಾರಿ ಇರಿದು ಸಹೋದರಿಯ ಕೊಲೆ: ಅಮ್ಮನಿಗೆ "ಸರ್ಪ್ರೈಸ್" ಎಂದ ಇಂಜಿನಿಯರ್!

SCROLL FOR NEXT