ರಾಜ್ಯ

ರಾಹುಲ್ ಗಾಂಧಿ ಪರ ಪ್ರತಿಭಟನೆ: ನಲಪಾಡ್ ಸೇರಿ 25 ಮಂದಿ ವಿರುದ್ಧ ಪ್ರಕರಣ ದಾಖಲು

Srinivasamurthy VN

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪರ ಪ್ರತಿಭಟನೆ ನಡೆಸಿದ್ದ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ವಿರುದ್ಧ ಪೊಲೀಸ್ ಎಫ್‌ಐಆರ್‌ ದಾಖಲಾಗಿದೆ.

ರಾಹುಲ್ ಗಾಂಧಿಯ ಭಾರತ್‌ ಜೋಡೊ ನ್ಯಾಯ ಯಾತ್ರೆಗೆ ಅಸ್ಸಾಂನಲ್ಲಿ ಅಡ್ಡಿಪಡಿಸಿದ್ದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಬೆಂಗಳೂರಿನಲ್ಲೂ ಸಹ ರಾಹುಲ್ ಗಾಂಧಿ ಪರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ನಲಪಾಡ್ ಪಂಜಿನ ಮೆರವಣೆಗೆ ನಡೆಸಿ ಪ್ರತಿಭಟಿಸಿದ್ದರು. ಈ ವೇಳೆ ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ್ದಕ್ಕಾಗಿ ನಲಪಾಡ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಲ್ಲದೆ, 25 ಮಂದಿಯ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಪೊಲೀಸರಿಂದ ಅನುಮತಿ ಪಡೆಯದೆ ಪಂಜಿನ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

SCROLL FOR NEXT