ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು 52 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 52 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 341ಕ್ಕೆ ಇಳಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ 52 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 341ಕ್ಕೆ ಇಳಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 12 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ 52 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 60 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 3456 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 1.50 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 312 ಮಂದಿ ಮನೆ ಆರೈಕೆಗೆ ಒಳಗಾದರೆ, 25 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರು ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!