ಬಂಟ್ವಾಳ: ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಯತ್ನಿಸಿದ ವೃದ್ಧ ದಂಪತಿ ಸಜೀವದಹನ
ತಾವು ಹಾಕಿದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದ ವೃದ್ಧ ದಂಪತಿ ಬೆಂಕಿ ಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ.
ಮಂಗಳೂರು: ತಾವು ಹಾಕಿದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದ ವೃದ್ಧ ದಂಪತಿ ಬೆಂಕಿ ಹಾರಿಸಲು ಹೋಗಿ ಜೀವವನ್ನೇ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಅಮ್ಟಾಡಿ ಬಳಿಯ ತುಂಡು ಪದವು ಎಂಬಲ್ಲಿ ಈ ಘಟನೆ ನಡೆದಿದ್ದು ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ.
ಮನೆ ಪಕ್ಕದ ಕಸಕ್ಕೆ ಹಾಕಿದ್ದ ಬೆಂಕಿ ಕಾಡಿಗೆ ವ್ಯಾಪಿಸುತ್ತದೆ ಎಂದು ತಿಳಿದು ಬೆಂಕಿಯನ್ನು ನಂದಿಸಲು ಯತ್ನಿಸಿದ್ದ ವೃದ್ಧ ದಂಪತಿ ಸಜೀವದಹನವಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.