ಪೊಲೀಸ್ ಆಯುಕ್ತ ಬಿ.ದಯಾನಂದ. 
ರಾಜ್ಯ

ಬೆಂಗಳೂರು: ತಲಘಟ್ಟಪುರ ಕಾವಲಿಗೆ ಹೈ ಡೆಫಿನಿಷನ್ ಕ್ಯಾಮೆರಾಗಳ ಅಳವಡಿಕೆ

ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ಬೆಂಗಳೂರು: ನಾಗರೀಕ ಸುರಕ್ಷತೆಗಾಗಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಚೇಂಜ್ ಮೇಕರ್ಸ್ ಆಫ್ ಕನಕಪುರ ರೋಡ್ ಅಸೋಸಿಯೇಷನ್ಸ್ ಹಾಗೂ ನಗರ ಪೊಲೀಸರು ಸಹಭಾಗಿತ್ವದಲ್ಲಿ ಸ್ಥಾಪಿಸಿರುವ ಗರುಡಾ ಸಿಸಿಟಿವಿ ಕಮಾಂಡ್ ಸೆಂಟರ್ ನ್ನು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಉದ್ಘಾಟಿಸಿದರು.

ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಗರುಡ ಸಿಸಿಟಿವಿ ಯೋಜನೆಯಡಿ ಹೈ ಡೆಫಿನಿಷನ್ 5 ಎಂಪಿ ಐಟಿ ಸಾಮರ್ಥ್ಯವುಲ್ಳ 300 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 101 ಕ್ಯಾಮೆರಾಗಳನ್ನು ಹಾಕಲಾಗಿದೆ. ಇವುಗಳು ಠಾಣೆಯ ಕಮಾಂಡ್ ಸೆಂಟರ್'ಗೆ ಸಂಪರ್ಕ ಹೊಂದಿದ್ದು, ಕ್ಯಾಮೆರಾಗಳಲ್ಲಿ ಸೆರೆಯಾಗುವ ದೃಶ್ಯಾವಳಿಗಳು ಠಾಣೆಯಲ್ಲಿ ಅಳವಡಸಿರುವ 955 ಇಂಚಿನ ಎಲ್ಇಡಿ ಬೃಹತ್ ಪರದೆಯಲ್ಲಿ ನೇರಪ್ರಸಾರದಲ್ಲಿ ಬಿತ್ತರವಾಗಲಿದೆ. ಈ ಮೂಲಕ ತಲಘಟ್ಟಪುರ ಠಾಣಾ ಸರಹದ್ದಿನಲ್ಲಿ ಬಿಗಿಯಾದ ಖಾಕಿ ಕಣ್ಗಾವಲಿರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಪೊಲೀಸರು ಎಲ್ಲ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಇರಲು ಸಾಧ್ಯವಿಲ್ಲ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಅಪರಾಧಗಳಿಗೆ ಕಡಿವಾಣ ಹಾಕಬೇಕಿದೆ’ ಎಂದು ದಯಾನಂದ್ ಅವರು ಹೇಳಿದರು.

ಸಿಎಂಕೆಆರ್‌ಎ ಕಾರ್ಯದರ್ಶಿ ವಿ.ಕೆ.ವತ್ಸ, ‘ಜನರ ಸುರಕ್ಷತೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡೆ ಕ್ಯಾಮೆರಾಗಳನ್ನು ಅಳವಡಿಸುವ ಯೋಚನೆ ಇದೆ’ ಎಂದು ತಿಳಿಸಿದರು.

ಸಿಎಂಕೆಆರ್‌ಎ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್  ಅವರು ಮಾತನಾಡಿ, ಯೋಜನೆಗೆ ತಲಘಟ್ಟಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎನ್ ಜಗದೀಶ್ ನೇತೃತ್ವದ ತಂಡ ಉತ್ತಮ ಬೆಂಬಲ ನೀಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT