ರಾಜ್ಯ

ಮಂಡ್ಯ ಹನುಮ ಧ್ವಜ ವಿವಾದ: ರಾಷ್ಟ್ರ ಧ್ಬಜ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ; ಸಿಎಂ ಸಿದ್ದರಾಮಯ್ಯ

Manjula VN

ಚಿತ್ರದುರ್ಗ/ಮಂಡ್ಯ: ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಚಿತ್ರದುರ್ಗದ ಎಸ್.ಜೆಎಂ ಶಾಲಾ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ (ಕೆರಗೋಡು ಗ್ರಾಮಮದಲ್ಲಿ ಪೊಲೀಸರು ಹನುಮಧ್ವಜ ಇಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.

ಈ ವೇಳೆ ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.

ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆನಪಿಗಾಗಿ ತಾಲೂಕಿನ ಕೆರಗೋಡು ಗ್ರಾಮದ 108 ಅಡಿ ಎತ್ತರದ ಧ್ವಜಸ್ಥಂಭದಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾದಾಗ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದು, ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ನಂತರ ಅಧಿಕಾರಿಗಳು ಸ್ಥಳದಲ್ಲಿ  144 ಸೆಕ್ಷನ್​ ಜಾರಿ ಮಾಡಿದರು. ಆದರೂ ಕೂಡ ಪ್ರತಿಭಟನೆ ಮುಂದುವರೆಸಿದ  ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು.

SCROLL FOR NEXT