ಸಿಎಂ ಸಿದ್ದರಾಮಯ್ಯ 
ರಾಜ್ಯ

ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಬೇಕು: ಹೆಚ್ ಡಿ ಕುಮಾರಸ್ವಾಮಿ

ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುವ ವೇಳೆ ಸಮಾಜದಲ್ಲಿ ಹಿಂದಿನಿಂದಲೂ ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಎಂದು ಹೇಳುತ್ತಾ ಬಿಜೆಪಿ ಸರ್ಕಾರ ರಾಷ್ಟ್ರಪತಿ ಶ್ರೀಮತಿ ದ್ರೌಪತಿ ಮುರ್ಮು ಅವರಿಗೆ ಅವಮಾನ ಮಾಡಿದೆ ಎಂದು ಆೋಪ

ಬೆಂಗಳೂರು: ಚಿತ್ರದುರ್ಗದಲ್ಲಿ ಭಾನುವಾರ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುವ ವೇಳೆ ಸಮಾಜದಲ್ಲಿ ಹಿಂದಿನಿಂದಲೂ ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಎಂದು ಹೇಳುತ್ತಾ ಕೇಂದ್ರ ಬಿಜೆಪಿ ಸರ್ಕಾರ ರಾಷ್ಟ್ರಪತಿ ಶ್ರೀಮತಿ ದ್ರೌಪತಿ ಮುರ್ಮು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿದ್ದರು.

ರಾಷ್ಟ್ರಪತಿಗಳನ್ನು ಸಂಬೋಧಿಸುವ ವೇಳೆ ಮುಖ್ಯಮಂತ್ರಿಗಳು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು.

ನಿನ್ನೆಯ ದಿನ ಚಾಮರಾಜನಗರದಲ್ಲಿ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರರವರು ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಓವೈಸಿ

ಡಿಸೆಂಬರ್‌ನಲ್ಲಿ ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ಭಾರತದ ಜಿಡಿಪಿ ಪ್ರಬಲ ಜಿಗಿತ: ಮೊದಲ ತ್ರೈಮಾಸಿಕದಲ್ಲಿ ಶೇ. 7.8 ರಷ್ಟು ಬೆಳವಣಿಗೆ

ವಿಶ್ವ ಚಾಂಪಿಯನ್‌ಶಿಪ್‌ನಿಂದ ಹೊರಬಿದ್ದ PV Sindhu: ಇಂಡೋನೇಷ್ಯಾದ ಶಟ್ಲರ್ ಕುಸುಮಾ ವಿರುದ್ಧ ಸೋಲು!

SCROLL FOR NEXT