ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿ 
ರಾಜ್ಯ

ಬಾಗಲಕೋಟೆ: ಶಾಲಾ ವಾರ್ಷಿಕೋತ್ಸವ ಮುಗಿಸಿ ವಾಪಸಾಗುವ ವೇಳೆ ಅಪಘಾತ; 4 ವಿದ್ಯಾರ್ಥಿಗಳ ದಾರುಣ ಸಾವು

ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಬಾಗಲಕೋಟೆ: ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಶ್ವೇತಾ ಪಾಟೀಲ (16), ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ವಿದ್ಯಾರ್ಥಿಗಳು.

ಅಲಗೂರು ಗ್ರಾಮದ ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ವಾಪಸ್ ಊರಿಗೆ ಮರಳುತ್ತಿದ್ದಾಗ ತಡರಾತ್ರಿ 12 ಗಂಟೆಯ ಸುಮಾರಿಗೆ ಅಪಘಾತವಾಗಿದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮದ‌ ಕಡೆ ಹೊರಟಿದ್ದಾಗ ಎದುರಿನಿಂದ ಬಂದ ಟ್ರ್ಯಾಕ್ಟರಿಗೆ ಶಾಲಾ ವಾಹನ ಡಿಕ್ಕಿಯಾಗಿದೆ. ಜಮಖಂಡಿ ಗ್ರಾಮೀಣ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT