ಕಾರು ಡಿಕ್ಕಿಯಾಗಿ ಸಾವನ್ನಪ್ಪಿರುವ ಹುಲಿ. 
ರಾಜ್ಯ

ಮೈಸೂರು: ರಸ್ತೆ ದಾಟುವ ವೇಳೆ ಕಾರು ಡಿಕ್ಕಿ, ಹುಲಿ ಸಾವು

ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ‌ ಹುಲಿಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ‌ ಹುಲಿಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸುಮಾರು ಒಂದೂವರೆ ವರ್ಷದ ಗಂಡು ಹುಲಿ ಸಾವನ್ನಪ್ಪಿದ್ದು, ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ಮು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರು ಮೈಸೂರಿನಿಂದ ನಂಜನಗೂಡು ಕಡೆಗೆ ಸಂಚರಿಸುವ ವೇಳೆ ಒಂದು ಬದಿಯಿಂದ ಮತ್ತೊಂದು ಬದಿಗೆ ಹುಲಿ ರಸ್ತೆ ದಾಟುವಾಗ ಢಿಕ್ಕಿ ಹೊಡೆದಿದೆ.

ಮೈಸೂರಿನ ಹೊರವಲಯದಲ್ಲಿ ಆಗಾಗ ಕಾಣಸಿಗುತ್ತಿದ್ದ ನಾಲ್ಕು ಹುಲಿ ಮರಿಗಳಲ್ಲಿ ಈ ಕೂಡ ಒಂದಾಗಿತ್ತು ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ. ಇದೀಗ ಕಾರನ್ನು ವಶಕ್ಕೆ ಪಡೆದುಕೊಂಡಿರುವ ಅರಣ್ಯಾಧಿಕಾರಿಗಳು, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!